54
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಗುರವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸರ್ಕಾರ ರಚನೆಯ ಗಡುವು ಮುಗಿಯುವ ಕೊನೆಯ ಕ್ಷಣದಲ್ಲಿ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
\ಮುಂಬೈನ ಐತಿಹಾಸಿಕ ಆಜಾದ್ ಕ್ರೀಡಾಂಗಣದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಅಲ್ಲದೇ ಬಾಲಿವುಡ್ ಸೆಲೆಬ್ರೆಟಿಗಳ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.