ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಗುರವಾರ ಸಂಜೆ ಪ್ರಬಲ ಭೂಕಂಪನ ಸಂಭವಿಸಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಗುರುವಾರ ಸಂಜೆ 4.19ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆಯ ಭೂಕಂಪನ ಸಂಭವಿಸಿದ್ದು ದೃಢಪಟ್ಟಿದ್ದು, ಜನರು ಭೀತರಾಗಿ ಮನೆ, ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ.
ಆಫ್ಥಾನಿಸ್ತಾನ ಮತ್ತು ತಜಕಿಸ್ತಾನ ಗಡಿ ಭಾಗದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದ್ದು, ಭೂಮಿಯಿಂದ 229 ಕಿ.ಮೀ. ಆಳದಲ್ಲಿ ಸಂಭವಿಸಿದೆ.
ಭೂಮಿ ನಡುಗಿದ ತೀವ್ರತೆಗೆ ಜನರು ಆತಂಕಕ್ಕೀಡಾಗಿದ್ದಾರೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಉಂಟಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.