Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಪಂಜಾಬ್ ನಲ್ಲಿ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಆಕಸ್ಮಿಕ: ಒಬ್ಬ ಪ್ರಯಾಣಿಕನಿಗೆ ಗಾಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
garib rath train

ಗರೀಬ್ ರಥ್ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳಲ್ಲಿ (ರೈಲು ಸಂಖ್ಯೆ 12204) ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ದುರಂತವೊಂದು ತಪ್ಪಿದ ಘಟನೆ ಪಂಜಾನಬ್ ನ ಅಮೃತಸರ ಬಳಿ ಸಂಭವಿಸಿದೆ.

ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲು ಅಮೃತಸರದಿಂದ ಪ್ರಯಾಣಿಸುತ್ತಿದ್ದಾಗ ಶನಿವಾರ ಬೆಳಿಗ್ಗೆ 7.30ರ ರೈಲಿನ ಎಸಿ ಕೋಚ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಬ್ಬ ಪ್ರಯಾಣಿಕನಿಗೆ ಗಾಯವಾಗಿದ್ದು ಹೊರತುಪಡಿಸಿದರೆ ಯಾವುದೇ ಜೀವನಹಾನಿ ಸಂಭವಿಸಿಲ್ಲ.

ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಪ್ರಯಾಣಿಕರೊಬ್ಬರು ಕೂಡಲೇ ಸರಪಳಿ ಎಳೆದು ರೈಲನ್ನು ನಿಲ್ಲಿಸಿದರು. ತಕ್ಷಣ, ಪೈಲಟ್ (ಚಾಲಕ) ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಕೇಳಿಕೊಂಡರು ಮತ್ತು ಬೆಂಕಿಯ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ರೈಲ್ವೆ ನಿಲ್ದಾಣದ ಅಧಿಕಾರಿಗಳು, ನೌಕರರು, ಜಿಆರ್‌ಪಿ, ಆರ್‌ಪಿಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿದವು. ಅಗ್ನಿಶಾಮಕ ದಳದವರನ್ನೂ ಸಹ ಘಟನಾ ಸ್ಥಳಕ್ಕೆ ತಂದು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಗೊಂದಲದಲ್ಲಿ ರೈಲಿನಿಂದ ಇಳಿಯಲು ಪ್ರಯತ್ನಿಸುವಾಗ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಆಕಸ್ಮಿಕದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ 6 ರೈಲುಗಳ ಮಾರ್ಗ ಬದಲಾಯಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment