ಗುಲ್ವಿಯನ್ ಬೇರ್ ಸೋಂಕಿಗೆ ಮುಂಬೈನಲ್ಲಿ 52 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, 8 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಮುಂಬೈನ ನಾಯರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 53 ವರ್ಷದ ವ್ಯಕ್ತಿ ಅಪರೂಪದ ನರರೋಗದ ಸೋಂಕಿನಿಂದ ಮೃತಪಟ್ಟಿದ್ದಾರೆ. ಮುಂಬೈನಲ್ಲಿ ಈ ಸೋಂಕಿಗೆ ಮೊದಲ ಬಲಿ ಇದಾಗಿದೆ.
ಮುಂಬೈ ಮಹಾನಗರ ಪಾಲಿಕೆ ಈ ವಿಷಯವನ್ನು ದೃಢಪಡಿಸಿದೆ. ಮಹಾರಾಷ್ಟ್ರ ಆರೋಗ್ಯ ಇಲಾಖೆ ಗುಲ್ವಿಯನ್ ಬೇರ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದುವರೆಗೆ 192 ಮಂದಿಗೆ ಸೋಂಕು ತಗುಲಿದೆ ಎಂದು ಶಂಕಿಸಲಾಗಿದೆ. ಶಂಕಿತರ ಮಾದರಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದೆ.
172 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಇದುವರೆಗೆ ಈ ಸೋಂಕಿಗೆ ಬಲಿಯಾದವರ ಒಟ್ಟಾರೆ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಬಹುತೇಕ ಸೋಂಕು ವರದಿಗಳು ಪುಣೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಪುಣೆ ನಗರದಲ್ಲಿ 40 ಪ್ರಕರಣ ಹಾಗೂ ಸುತ್ತಮುತ್ತಲ ಹಳ್ಳಿಗಳಲ್ಲಿ 92 ಪ್ರಕರಣಗಳು ದೃಢಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


