Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ದೇಶದ ಮೊದಲ ವಂದೇ ಭಾರತ್ ಸ್ಪೀಪರ್ ರೈಲಿಗೆ ಪ್ರಧಾನಿ ಚಾಲನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 41 ವೀಕ್ಷಣೆಗಳು
vandhe bharat sleeper

ದೇಶದ ಮೊದಲ ವಂದೇ ಭಾರತ್​ ಸ್ಲೀಪರ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾ ಟೌನ್​​ ನಿಲ್ದಾಣದಲ್ಲಿ ಚಾಲನೆ ನೀಡಿದ್ದಾರೆ.

ವಂದೇ ಭಾರತ್​ ಆವೃತ್ತಿಯ ರೈಲುಗಳ ಮೊದಲ ಸ್ಲೀಪರ್​ ರೈಲು ಇದಾಗಿದ್ದು, ಅಸ್ಸಾಂನ ಗುವಾಹಟಿ ಮತ್ತು ಬಂಗಾಳದ ರಾಜಧಾನಿ ಕೋಲ್ಕತ್ತಾದ ನಡುವೆ ಸಂಚರಿಸಲಿದೆ.

ರೈಲಿಗೆ ಚಾಲನೆ ನೀಡಿದ ಬಳಿಕ ಮಕ್ಕಳು ಮತ್ತು ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದ ಪ್ರಧಾನಿ ಮೋದಿ, ಬಳಿಕ ಲೋಕೋ ಪೈಲಟ್​​ಗಳ ಜೊತೆಗೂ ಮಾತುಕತೆ ಮಾಡಿದರು.

ಇದೇ ವೇಳೆ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳ ಸಂಪರ್ಕ ಬಲಪಡಿಸುವ 3,250 ಕೋಟಿ ರೂಪಾಯಿ ವೆಚ್ಚದ ಹಲವಾರು ರೈಲು ಮತ್ತು ರಸ್ತೆ ನಿರ್ಮಾಣ ಯೋಜನೆಗಳಿಗೂ ಪ್ರಧಾನಿ ಮೋದಿ ಚಾಲನೆ ನೀಡಿದರು.

ನ್ಯೂ ಜಲ್ಪೈಗುರಿಯಿಂದ ನಾಗರಕೋಯಿಲ್ ಮತ್ತು ತಿರುಚಿರಾಪಳ್ಳಿಯೊಂದಿಗೆ ಸಂಪರ್ಕಿಸುವ ನಾಲ್ಕು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಮತ್ತು ಅಲಿಪುರ್ದೂರ್​​ನಿಂದ ಬೆಂಗಳೂರು ಮತ್ತು ಮುಂಬೈಗೆ ಸಂಪರ್ಕಿಸುವ ರೈಲುಗಳಿಗೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರಿಸಿದರು.

ಆಧುನಿಕ ಭಾರತದಲ್ಲಿ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಪೂರೈಸಲು ಸಂಪೂರ್ಣ ಹವಾನಿಯಂತ್ರಿತ ವಂದೇ ಭಾರತ್ ಸ್ಲೀಪರ್ ರೈಲು ಪ್ರಯಾಣಿಕರಿಗಾಗಿ ಅನಾವರಣಗೊಳಿಸಲಾಗಿದೆ. ಕಡಿಮೆ ದರದಲ್ಲಿ ವಿಮಾನಯಾನ ಪ್ರಯಾಣದ ಅನುಭವ ಇದರಲ್ಲಿ ಸಿಗಲಿದೆ. ಈ ರೈಲು ದೀರ್ಘ ಪ್ರಯಾಣ, ವೇಗ, ಸುರಕ್ಷಿತ ಮತ್ತು ಹೆಚ್ಚು ಅನುಕೂಲಕರವಾಗಿರಲಿದೆ ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment