Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು, ಏ.27ರೊಳಗೆ ಭಾರತ ತೊರೆಯಲು ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
india pakistan border

ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ಏಪ್ರಿಲ್ 27ರೊಳಗೆ ದೇಶ ತೊರೆಯುವಂತೆ ಸೂಚಿಸಿದೆ.

ಗುರುವಾರ ನಡೆದ ಭದ್ರತಾ ಸಂಪುಟ ಸಮಿತಿಯ ನಂತರ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದ ಭಾಗವಾಗಿ, ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೀಸಾಗಳನ್ನು ಏಪ್ರಿಲ್ 27 ರಿಂದ ರದ್ದುಗೊಳಿಸಲಾಗುವುದು.

ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನಿ ನಾಗರಿಕರಿಗೆ ಈಗಾಗಲೇ ನೀಡಲಾದ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪಾಕ್ ನಾಗರೀಕರಿಗೆ ನೀಡಿದ ವೀಸಾಗಳನ್ನು ಏಪ್ರಿಲ್ 27ರಿಂದ ರದ್ದು ಮಾಡಲಾಗುವುದು. ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೈದ್ಯಕೀಯ ವೀಸಾಗಳು ಕೇವಲ ಏಪ್ರಿಲ್ 29ರವರೆಗೆ ಮಾತ್ರ ಮಾನ್ಯವಾಗಿರಲಿದೆ. ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ನಾಗರಿಕರು ತಮ್ಮ ವೀಸಾದ ಮಾನ್ಯತೆಯ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯಬೇಕು.

ಭಾರತೀಯ ನಾಗರಿಕರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ. ಪಾಕಿಸ್ತಾನದಲ್ಲಿರುವ ಭಾರತೀಯ ನಾಗರಿಕರು ಆದಷ್ಟು ಬೇಗ ಭಾರತಕ್ಕೆ ಮರಳಲು ಸೂಚನೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ 26 ಜನರ ಜೀವವನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸಚಿವಾಲಯವು ಭಾರತೀಯ ಪ್ರಜೆಗಳನ್ನು ಒತ್ತಾಯಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment