ಬೆಂಗಳೂರು: ದೇಶಾದ್ಯಂತ ಜಲಮಾರ್ಗಗಳ ಮೂಲಸೌಕರ್ಯ ನವೀಕರಣಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ವಿನಿಯೋಗಿಸುವುದಾಗಿ ಒಳನಾಡು ಜಲಮಾರ್ಗಗಳ ಅಭಿವೃದ್ಧಿ ಮಂಡಳಿ (ಐಡಬ್ಲ್ಯೂಡಿಸಿ) ಘೋಷಿಸಿದೆ.
ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ (ಐಡಬ್ಲ್ಯೂಎಐ) ಅಡಿಯಲ್ಲಿ ಜಲಮಾರ್ಗಗಳ ಅಭಿವೃದ್ಧಿಯ ನೋಡಲ್ ಏಜೆನ್ಸಿಯಾದ ಭಾರತದ ಒಳನಾಡು ಜಲಮಾರ್ಗಗಳ ಪ್ರಾಧಿಕಾರ (ಐಡಬ್ಲ್ಯೂಡಿಸಿ) ಆಯೋಜಿಸಿದ ಐಡಬ್ಲ್ಯೂಡಿಸಿಯ ಎರಡನೇ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.
ಮುಂದಿನ ಐದು ವರ್ಷಗಳಲ್ಲಿ ರೂ. 50,000 ಕೋಟಿಗಿಂತ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ವಿವಿಧ ರಾಜ್ಯಗಳ 21 ಒಳನಾಡು ಜಲಮಾರ್ಗಗಳ ಅಭಿವೃದ್ದಿಗೆ ೧೪೦೦ ಕೋಟಿ ರೂ.ಗೂ ಅಧಿಕ ಮೊತ್ತ ವಿನಿಯೋಗಿಸಲು ನಿರ್ಧರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಬಂದರು, ಹಡಗು ಮತ್ತು ಜಲಮಾರ್ಗಗಳ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ವಹಿಸಿದ್ದರು. ಅಸ್ಸಾಂನ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೊವಾಲ್ ಅವರೊಂದಿಗೆ ಐಡಬ್ಲ್ಯೂಡಿಸಿ ಸಭೆ ಉದ್ಘಾಟಿಸಿದರು.