Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ನಾಳೆ ಮಾಘ ಹುಣ್ಣಿಮೆ ಸ್ನಾನ: ಕುಂಭಮೇಳಕ್ಕೆ ಪ್ರತಿದಿನ 50,000 ವಾಹನ ಆಗಮನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
kumba mela traffic
kumba mela traffic

ಮಾಘ ಹುಣ್ಣಿಮೆ ದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ.

45 ದಿನಗಳ ಕಾಲ ನಡೆಯುವ ಕುಂಭಮೇಳದಲ್ಲಿ ಈಗಾಗಲೇ 46 ಕೋಟಿಗೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಇತ್ತೀಚೆಗಷ್ಟೇ ಅಮೃತ ಸ್ನಾನ ಮುಗಿದಿದ್ದು, ಇದೀಗ ಮಾಘ ಹುಣ್ಣಿಮೆ ಸ್ನಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ.

ಈಗಾಗಲೇ ಉತ್ತರ ಪ್ರದೇಶದ ಪ್ರಯಾಗ್ ರಾಜ್ ತಲುಪುವ 6 ಮಾರ್ಗಗಳಲ್ಲಿ ವಾಹನಗಳ ದಟ್ಟಣೆ ಉಂಟಾಗಿದ್ದು, ಒಟ್ಟಾರೆ 6 ರಸ್ತೆಗಳೂ ಸೇರಿ 300 ಕಿ.ಮೀ. ಉದ್ದದಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರತಿ ರಸ್ತೆಯಲ್ಲೂ 25ರಿಂದ 50 ಕಿ.ಮೀ.ನಷ್ಟು ದೂರ ವಾಹನಗಳು ನಿಂತಿವೆ ಎಂದು ವರದಿಗಳು ಹೇಳಿವೆ.

ಪ್ರತಿ 50 ಕಿ.ಮೀ. ದೂರ ಸಾಗಲು 10ರಿಂದ 12 ಗಂಟೆ ಸಮಯ ಬೇಕಾಗುತ್ತದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ ಪ್ರಯಾಗ್ ರಾಜ್ ಕಡೆ ಹೋಗುವ ವಾಹನಗಳನ್ನು ಮಧ್ಯಪ್ರದೇಶದ ಪೊಲೀಸರು ವಾಪಸ್ ಹೋಗುವಂತೆ ಮನವಿ ಮಾಡುತ್ತಿದ್ದಾರೆ. ಪ್ರಯಾಗ್ ರಾಜ್-ವರಣಾಸಿ ನಡುವಿನ ಬಧೋನಿ ಮಾರ್ಗದಲ್ಲಿ ಯಾವುದೇ ಟ್ರಾಫಿಕ್ ಜಾಮ್ ಸಂಭವಿಸಿಲ್ಲ.

ಕಳೆದ ಮೂರು ದಿನಗಳಿಂದ ಪ್ರಯಾಗ್ ರಾಜ್ ಕಡೆ ಪ್ರತಿ ದಿನ ಸುಮಾರು 50 ಸಾವಿರ ವಾಹನಗಳು ಆಗಮಿಸುತ್ತಿವೆ ಎಂದು ವರದಿಗಳು ಹೇಳಿವೆ. ರಾಷ್ಟ್ರೀಯ ಹೆದ್ದಾರಿ 19ರಲ್ಲಿ ಟೋಲ್ ಬಳಿ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ನಿಲುಗಡೆ ಆಗಿದ್ದು, ಕೊನೆಗೆ ಟೋಲ್ ಉಚಿತ ಮಾಡಿ ವಾಹನಗಳಿಗೆ ಸರಾಗವಾಗಿ ಸಾಗಲು ಅನುವು ಮಾಡಿಕೊಟ್ಟ ನಂತರ ಸ್ವಲ್ಪ ಪ್ರಮಾಣದಲ್ಲಿ ವಾಹನ ದಟ್ಟಣೆ ಕಡಿಮೆ ಆಗಿದೆ ಎಂದು ವರದಿಗಳು ಹೇಳಿವೆ.

ಸೋಮವಾರ ರಾತ್ರಿ 12 ಗಂಟೆಯಿಂದ ಮಂಗಳವಾರ 10 ಗಂಟೆಯವರೆಗೆ ಸುಮಾರು 20 ಸಾವಿರ ವಾಹನಗಳು ಟೋಲ್ ದಾಟಿವೆ. ಮಾಘ ಸ್ನಾನದ ಪ್ರಯುಕ್ತ ಮಂಗಳವಾರ ಸಂಜೆ ನಂತರ ಹಾಗೂ ಬುಧವಾರ ವಾಹನಗಳ ಸಂಖ್ಯೆ ದುಪ್ಪಟ್ಟು ಆಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಘ ಸ್ನಾನದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ಹೆಚ್ಚುವರಿ 24 ರೈಲುಗಳನ್ನು ಪ್ರಯಾಗ್ ರಾಜ್ ಗೆ ಬಿಟ್ಟಿದೆ. ಆದರೆ ರೈಲುಗಳು ತುಂಬಿದ್ದರೂ ಹೆಚ್ಚುವರಿ ರೈಲುಗಳ ಸೇವೆ ದೊರೆಯದೇ ಪ್ರಯಾಣಿಕರು ರೈಲುಗಳ ಬಾಗಿಲು, ಕಿಟಕಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆಗಳು ವರದಿಯಾಗುತ್ತಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment