Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ: ಸಿಎಂ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಸ್ಪಷ್ಟನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು

ಬೆಂಗಳೂರು: ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ, 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ​ ಸ್ಪಷ್ಟಪಡಿಸಿದ್ದಾರೆ.

ತಮ್ಮ ಎಕ್ಸ್​​ ಖಾತೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ಬರೆದುಕೊಂಡಿದ್ದಾರೆ.

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ ಅನುಮೋದನೆ ನೀಡಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ​​ಗೆ ಪತ್ರ ಬರೆದಿದ್ದರು. ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಕನ್ನಡ, ತಮಿಳು ಮಾತನಾಡುವ ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆಗಾಗಿ ಈ ಮಸೂದೆಯನ್ನು ತರಲಾಗಿದೆ. ಹಕ್ಕು ರಕ್ಷಣೆಗೆ ಮಸೂದೆಯ ಸೆಕ್ಷನ್ 7ರಲ್ಲಿ ರಕ್ಷಣಾತ್ಮಕ ನಿಯಮ ಅಳವಡಿಕೆ ಮಾಡಲಾಗಿದೆ. ಸಚಿವಾಲಯ, ಇಲಾಖೆ ಮುಖ್ಯಸ್ಥರ ಜತೆ ಪತ್ರ ವ್ಯವಹಾರವನ್ನು ಕೂಡ ತಮ್ಮ ಭಾಷೆಯಲ್ಲೇ ನಡೆಸಬಹುದು ಎಂದು ಹೇಳಿದ್ದಾರೆ. ಕಚೇರಿಗಳಲ್ಲೂ ತಮ್ಮ ಮಾತೃಭಾಷೆಯಲ್ಲೇ ಪತ್ರ ವ್ಯವಹಾರಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಕೇರಳ ಸಚಿವಾಲಯ ಹಾಗೂ ಕಚೇರಿಗಳ ನಿಮ್ಮ ಭಾಷೆಯಲ್​ಲೇ ಉತ್ತರಿಸುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮದ ಅನ್ವಯ ಲಭ್ಯವಿರುವ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಭಾರತೀಯ ಸಂವಿಧಾನದ 346 ಮತ್ತು 347ನೇ ವಿಧಿಗಳು ಹಾಗೂ 1963ರ ಅಧಿಕೃತ ಭಾಷಾ ಕಾಯ್ದೆಗೆ ಈ ಭಾಷಾ ನೀತಿ ಅನುಗುಣವಾಗಿದೆ. ಕೇರಳ ಸರ್ಕಾರ ಒಕ್ಕೂಟ ವ್ಯವಸ್ಥೆಯ ಹಕ್ಕುಗಳನ್ನು ಎತ್ತಿಹಿಡಿಯುತ್ತಿದೆ. ಪ್ರತಿಯೊಬ್ಬ ನಾಗರಿಕನ ಭಾಷಾ ಗುರುತನ್ನು ರಕ್ಷಿಸಲು ಸರ್ಕಾರ ಬದ್ಧ ಎಂದು ಹೇಳಿದ್ದಾರೆ.

ಮಸೂದೆಯಲ್ಲೇನಿದೆ?

ಈ ಮಸೂದೆ ಕೇರಳದಾದ್ಯಂತ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಮಸೂದೆ. 016 ರಲ್ಲಿ ಮಂಡಿಸಲಾದ ಈ ಮಸೂದೆಯನ್ನು ಭಾಷಾ ಅಲ್ಪಸಂಖ್ಯಾತರಿಗೆ ವಿರುದ್ದವಾಗಿದೆ ಎಂದು ಅಂದಿನ ರಾಜ್ಯಪಾಲರು ತಿರಸ್ಕರಿಸಿದ್ದರು.

1 ರಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮ ಶಾಲೆಯೂ ಸೇರಿದಂತೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯಗೊಳಿಸುವುವ ಬಗ್ಗೆ ಈ ಮಸೂದೆಯಲ್ಲಿ ಉಲ್ಲೇಖವಾಗಿದೆ. ರಾಜ್ಯಪಾಲರು ತಿರಸ್ಕರಿಸಿದ್ದ ನಂತರ ಇದರಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದು, ಮತ್ತೆ ಈ ಮಸೂದೆಯನ್ನು ಮಂಡಿಸಲು ಮುಂದಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment