ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಪ್ರಕರಣಗಳು ಏರಿಕೆಯಾಗುತ್ತಿದೆ. ಇದರಿಂದ ಸೋಂಕಿತರ ಸಂಖ್ಯೆ 4000 ಗಡಿ ಸಮೀಪಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, 203 ಹೊಸ ಕೊರೊನಾ ವೈರಸ್ ಪ್ರರಕಣಗಳು ದೃಢಪಟ್ಟಿದೆ. ರಾಜಧಾನಿ ದೆಹಲಿಯಲ್ಲಿ ಇಬ್ಬರು, ಪಂಜಾಬ್ ನಲ್ಲಿ ಒಬ್ಬರು ಮೃತಪಟ್ಟಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 12 ದಾಟಿದೆ.
ಮಹಾರಾಷ್ಟ್ರ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಹೆಚ್ಚಾಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಇದೀಗ ಕರ್ನಾಟಕ, ಗುಜರಾತ್, ದೆಹಲಿ, ತಮಿಳುನಾಡುಗಳಲ್ಲಿ ಭಾನುವಾರ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.
ದೆಹಲಿಯಲ್ಲಿ ಭಾನುವಾರ 483 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಗುಜರಾತ್ ನಲ್ಲಿ 338 ಮತ್ತು ಪಶ್ಚಿಮ ಬಂಗಾಳದಲ್ಲಿ 331, ಕರ್ನಾಟಕದಲ್ಲಿ 253, ತಮಿಳುನಾಡಿನಲ್ಲಿ 189 ಪ್ರಕರಣಗಳು ಕಾಣಿಸಿಕೊಂಡಿವೆ. ಕೇರಳದಲ್ಲಿ ಗರಿಷ್ಠ 1435 ಸಕ್ರಿಯ ಪ್ರಕರಣಗಳಿವೆ.
ಉತ್ತರ ಪ್ರದೇಶದಲ್ಲಿ 157, ಪಂಜಾಬ್ ನಲ್ಲಿ 6, ರಾಜಸ್ಥಾನ್ ನಲ್ಲಿ ಪ್ರಕರಣಗಳು ದಾಖಲಾಗಿದ್ದು, ಕೇಂದ್ರ ಸರ್ಕಾರ ಕೋವಿಡ್ ಮುನ್ನೆಚ್ಚರಿಕೆಗೆ ಆಸ್ಪತ್ರೆಗಳಲ್ಲಿ ಕನಿಷ್ಠ ಹಾಸಿಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.


