ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಯಾವುದೇ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಉಗ್ರರ ದಾಳಿ ಹಿನ್ನೆಲೆಯಲ್ಲಿ ಗುರುವಾರ ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರು ದಾಳಿಯನ್ನು ಎಲ್ಲರೂ ಒಗ್ಗಟ್ಟಿನಿಂದ ಖಂಡಿಸಿದ್ದು, ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು.
ಸಭೆಯಲ್ಲಿ ಎಲ್ಲಾ ಪಕ್ಷಗಳು ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಎಂದು ಆಗ್ರಹಿಸಿದ್ದು, ಪ್ರವಾಸಿಗರ ಹತ್ಯೆ ಘಟನೆಯನ್ನು ತೀವ್ರವಾಗಿ ಖಂಡಿಸಿದವು.
ಸಭೆಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು.


