133 ಪ್ರಯಾಣಿಕರಿದ್ದ ವಿಮಾನ ಗುಜರಾತ್ ರಾಜಧಾನಿ ಅಹಮದಾಬಾದ್ ನ ವಿಮಾನ ನಿಲ್ದಾಣದ ಬಳಿ ಪತನಗೊಂಡ ಭೀಕರ ಘಟನೆ ಶುಕ್ರವಾರ ಸಂಭವಿಸಿದೆ.
ಗುರುವಾರ ಬೆಳಿಗ್ಗೆ ಅಹಮದಾಬಾದ್ ನಿಂದ ಲಂಡನ್ ಪ್ರಯಾಣ ಬೆಳೆಸುತ್ತಿದ್ದ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕೆ ಅಪ್ಪಳಿಸಿದೆ ಎಂದು ಹೇಳಲಾಗಿದೆ. 133 ಪ್ರಯಾಣಿಕರು ಸೇರಿದಂತೆ 135 ಮಂದಿ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ.
ವಿಮಾನದ ಹಿಂದಿನ ರೆಕ್ಕೆ ಮರಕ್ಕೆ ಬಡಿದ ಪರಿಣಾಮ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಘಟನೆಯ ಮಾಹಿತಿ ಬರುತ್ತಿದ್ದಂತೆ 7 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.


