ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ 26 ಪ್ರವಾಸಿಗರ ಹತ್ಯೆಗೆ ಪ್ರತೀಕಾರವಾಗಿ ನಡೆಸುವ ಕಾರ್ಯಾಚರಣೆಯ ಪರಮಾಧಿಕಾರವನ್ನು ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನಾಪಡೆಗಳಿಗೆ ನೀಡಿದ್ದಾರೆ.
ಮಂಗಳವಾರ ನಡೆದ ಭಾರತೀಯ ಸೇನಾ ಪಡೆ ಮುಖ್ಯಸ್ಥರು ಸೇರಿದಂತೆ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಮೋದಿ ಭಾರತೀಯ ಸೇನಾಪಡೆಗಳಿಗೆ ಕಾರ್ಯಾಚರಣೆಯ ರೂಪುರೇಷೆ, ಸಮಯ ಸೇರಿದಂತೆ ಸಂಪೂರ್ಣ ಅಧಿಕಾರ ನೀಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್, ಭಾರತೀಯ ಸೇನಾ ಚೀಫ್ ಮುಖ್ಯಸ್ಥರ ಸಭೆಯಲ್ಲಿ ಉಗ್ರರ ವಿರುದ್ಧ ಯಾವುದೇ ರೀತಿಯ ಕಾರ್ಯಾಚರಣೆ ನಡೆಸುವ ತೀರ್ಮಾನವನ್ನು ಸೇನಾ ಪಡೆಗಳಿಗೆ ನೀಡಿದ್ದಾರೆ.
ಭಾರತೀಯ ಘನತೆ ಹಾಗೂ ಭಾರತೀಯರ ಸುರಕ್ಷತೆ ದೃಷ್ಟಿಯಿಂದ ಯಾವುದೇ ಕ್ರಮ ಕೈಗೊಳ್ಳಬಹುದು. ಇದರಲ್ಲಿ ಯಾವುದೇ ಮಧ್ಯಸ್ಥಿಕೆ ಇರುವುದಿಲ್ಲ ಎಂದು ಮೋದಿ ಹೇಳಿದ್ಧಾರೆ.
ಸಭೆ ಮುಗಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.


