Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
Pamban Bridge

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಪಂಬಲ್ ನಲ್ಲಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ.

535 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವರ್ಟಿಕಲ್‌ ಲಿಫ್ಟ್‌ ಸೇತುವೆಯಿಂದ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ಈ ಬ್ರಿಡ್ಜ್ ರಾಮೇಶ್ವರಂ ಹಾಗೂ ಧನುಷ್ಕೋಡಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ.

ಭಾನುವಾರ ಮಧ್ಯಾಹ್ನ 12:30ಕ್ಕೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ ಲೋಕಾರ್ಪಣೆ ಮಾಡಿದರು‌. ಇದೇ ವೇಳೆ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.

೧೧೧ ವರ್ಷಗಳ ಪುರಾತನ ಪಂಬನ್ ರೈಲು ಸೇತುವೆ ಶಿಥಿಲಗೊಂಡಿದ್ದು, ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಿಸಲಾಗಿದೆ. ಹಳೇ ಬ್ರಿಡ್ಜ್‌ ಮಾನವ ಸಹಿತವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ನೂತನ ಬ್ರಿಡ್ಜ್‌ ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತೆ. ಇದು ಎಲೆಕ್ಟ್ರಿಕಲ್ ಆಟೋ‌ಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದೆ. ಹಳೇ ಬ್ರಿಡ್ಜ್ ತೆರೆದುಕೊಳ್ಳಲು 45 ನಿಮಿಷ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಬ್ರಿಡ್ಜ್ 5.3 ನಿಮಿಷದಲ್ಲಿ ತೆರೆದುಕೊಳ್ಳಲಿದೆ.

ಸುಮಾರು 2.5 ಕಿಲೋ ಮೀಟರ್​ ಉದ್ದದ ದೇಶದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲು ಸೇತುವೆ ಇದಾಗಿದ್ದು, ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ. ಮುಖ್ಯಭೂಮಿಯಿಂದ ರಾಮೇಶ್ವರಂಗೆ 5 ನಿಮಿಷದ ಪ್ರಯಾಣಿಸಬಹುದಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment