ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ 10 ವರ್ಷದ ಬಾಲಕಿಯನ್ನು ಅಪಹರಿಸಿದ 16 ವರ್ಷದ ಬಾಲಕ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಅರವಳ್ಳಿ ಜಿಲ್ಲೆಯ ಧನುಸುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಂಗಳವಾರದಿಂದ ಮಗಳು ಮನೆಯಿಂದ ಕಾಣದೇ ಇದ್ದಾಗ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
10 ವರ್ಷದ ಬಾಲಕಿ ಪೋಷಕರ ಮೊಬೈಲ್ ಫೋನ್ ಬಳಸುತ್ತಿದ್ದು, ಪೋಷಕರು ಬಳಸುತ್ತಿದ್ದ ಸ್ಮಾರ್ಟ್ ಫೋನ್ ನಲ್ಲಿ ಇನ್ ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದರು.
ತಾಯಿಯ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕನ ಜೊತೆ ಪದೇಪದೆ ಮಾತನಾಡುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಪೊಲೀಸರು ಮಾನವ ಗುಪ್ತಚರಿಕೆ ಮತ್ತು ತಾಂತ್ರಿಕ ನೆರವಿನಿಂದ ಬಾಲಕನ ಮನೆಯಲ್ಲಿ ಪತ್ತೆಯಾಗಿದ್ದಾಳೆ.
ಪೋಷಕರ ಸ್ಮಾರ್ಟ್ ಫೋನ್ ನಲ್ಲಿ ಅಕ್ಕ-ತಂಗಿಯರು 10 ಇನ್ ಸ್ಟಾಗ್ರಾಂ ಖಾತೆಗಳನ್ನು ತೆರೆದಿದ್ದು, ಇದರಲ್ಲಿ 2 ಮಾತ್ರ ಚಾಲ್ತಿಯಲ್ಲಿತ್ತು. ಇದರ ಮೂಲಕ ಚಾಟ್ ಮಾಡುತ್ತಿದ್ದರು. ಪರಿಚಯವಾದ ಬಾಲಕಿಯನ್ನು ಕರೆಸಿಕೊಂಡು ಕಿಡ್ನಾಪ್ ಮಾಡಿದ ಬಾಲಕ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಬಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಅಪ್ರಾಪ್ತರ ಶಿಕ್ಷೆಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಆತನ ಕೌನ್ಸಿಲಿಂಗ್ ಗೆ ಪ್ರಯತ್ನ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.