ಮುಖ್ಯಮಂತ್ರಿ ಯಾರೆಂದು ಇನ್ನೂ ನಿಶ್ಚಯವಾಗದಿದ್ದರೂ ಸಂಭಾವ್ಯ ಸಿಎಂ ಪದಗ್ರಹಣದ ತಯಾರಿ ಮಾತ್ರ ಜೋರಾಗಿ ನಡೆದಿದೆ.
ಡಿಸೆಂಬರ್ 5ರಂದು ಮಹಾರಾಷ್ಟ್ರದ ಹೊಸ ಮಹಾಯುತಿ ಸರ್ಕಾರದ ಪ್ರಮಾಣವಚನ ಸಮಾರಂಭಕ್ಕಾಗಿ ಮುಂಬೈನ ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಕಾರ್ಯಕ್ರಮದಲ್ಲಿ ಪಿಎಂ ಭಾಗವಹಿಸುವ ನಿರೀಕ್ಷೆಯಿದೆ.
ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿ ಪರಿಗಣಿಸಲಾಗುತ್ತಿದೆ, ಆದರೆ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ಸಿಎಂ ಹುದ್ದೆಗೆ ಇನ್ನೂ ಯಾವುದೇ ಹೆಸರನ್ನು ಘೋಷಿಸಿಲ್ಲ.
ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾನ್ಕುಲೆ ಸಮಾರಂಭದ ಸಿದ್ಧತೆಗಳ ಮೇಲ್ವಿಚಾರಣೆ ನಡೆಸುತ್ತಿದ್ದು, ಸೋಮವಾರ ದಕ್ಷಿಣ ಮುಂಬೈನ ಸ್ಥಳಕ್ಕೆ ಭೇಟಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂದು ಬವಾನ್ಕುಲೆ ಈ ಹಿಂದೆ ಹೇಳಿದ್ದರೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದೆ.
ಇದಲ್ಲದೆ, ಕೇಂದ್ರ ಸಚಿವರು, ರಾಜ್ಯಪಾಲರು ಮತ್ತು ಕೇಂದ್ರ ಬಿಜೆಪಿಯ ಪ್ರಮುಖ ಪದಾಧಿಕಾರಿಗಳು ಸಹ ಹಾಜರಾಗುವ ನಿರೀಕ್ಷೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಆಸ್ಪತ್ರೆ ಸೇರಿದ ಶಿಂಧೆ
ಮಹಾರಾಷ್ಟ್ರದ ಮುಖ್ಯಮಂತ್ರಿಯ ಬಗ್ಗೆ ಸಸ್ಪೆನ್ಸ್ ಮಧ್ಯೆ, ಶಿಂಧೆ ಅವರ ಆರೋಗ್ಯ ಸ್ಥಿತಿ ಸುಧಾರಿಸುವ ಯಾವುದೇ ಲಕ್ಷಣಗಳನ್ನು ತೋರದ ಕಾರಣ ಅವರನ್ನು ಮಂಗಳವಾರ ಥಾಣೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.
ವೈದ್ಯರು ಅವರ ಆರೋಗ್ಯದ ಸಂಪೂರ್ಣ ಪರೀಕ್ಷೆಗೆ ಸಲಹೆ ನೀಡಿದರು. ಶಿಂಧೆ ಕಳೆದ ವಾರದಿಂದ ಗಂಟಲು ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದರು. ಅವರ ಆರೋಗ್ಯದ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು.
ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ಮಹಾಯುತಿ ಭಾರಿ ಜನಾದೇಶವನ್ನು ಪಡೆದಿದ್ದರೂ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಅಥವಾ ಸರ್ಕಾರವಿಲ್ಲದೆ 10 ದಿನಗಳು ಕಳೆದಿವೆ.
ನವೆಂಬರ್ 23, 2024ರಂದು ಚುನಾವಣಾ ಫಲಿತಾಂಶಗಳನ್ನು ಘೋಷಿಸಿದಾಗಿನಿಂದ, ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಹೇಗೆ ಹೊಸ ಕೆಳಮಟ್ಟಕ್ಕೆ ಇಳಿದಿದೆ ಎಂಬ ಚರ್ಚೆಯು ಬದಲಾಗಿದೆ. ಆದರೆ ಇಷ್ಟು ದಿನವಾದರೂ ಸಿಎಂ ಘೋಷಿಸದ ಮಹಾಯುತಿ ಕ್ರಮ ಪ್ರತಿಪಕ್ಷ ಮತ್ತು ಮತದಾರರ ಕಣ್ಣಲ್ಲಿ ಹಾಸ್ಯಾಸ್ಪದ ಸರ್ಕಸ್ ಎನಿಸಿದೆ.