Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 37 ವೀಕ್ಷಣೆಗಳು
kannadavahini - priyanka gandhi
kannadavahini - priyanka gandhi

ಕಾಂಗ್ರೆಸ್‌ನ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ (Priyanka Gandhi) ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ವಯನಾಡಿನ ಸಂಸದರಾಗಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಇಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಹಸ್ತಾಂತರಿಸಲಾಗಿದೆ.

ನಾಳೆ ಲೋಕಸಭೆಯಲ್ಲಿ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದೇವೇಳೆ, ಪ್ರಿಯಾಂಕಾ ಗಾಂಧಿಗೆ ಸಿಹಿ ತಿನಿಸುವ ಮೂಲಕ ರಾಹುಲ್ ಗಾಂಧಿ ಶುಭಾಶಯ ತಿಳಿಸಿದ್ದಾರೆ.

ಈ ನಡುವೆ, ತಮ್ಮ ಮೇಲೆ ವಯನಾಡು ಜನರು ತೋರಿದ ಅಭೂತಪೂರ್ವ ವಿಶ್ವಾಸ ಮತ್ತು ಬೆಂಬಲಕ್ಕೆ ಪ್ರಿಯಾಂಕಾ ಗಾಂಧಿ ಧನ್ಯವಾದ ತಿಳಿಸಿದ್ದಾರೆ. ಅವರ ಜೊತೆಗಿನ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು, ಕ್ಷೇತ್ರದಲ್ಲಿ ಮುಂದಿನ ಕೆಲಸಗಳ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆಸಿದ್ದಾರೆ.

ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸಿದ್ದು, ವಯನಾಡಿನ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ವಯನಾಡು ಲೋಕಸಭಾ ಉಪಚುನಾವಣೆಯ ಮತ ಎಣಿಕೆಯಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಪ್ರಿಯಾಂಕಾ ಜಯಗಳಿಸಿದ್ದರು. ಈ ವರ್ಷ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿ ಗೆಲುವಿನ ಅಂತರಕ್ಕಿಂತಲೂ ಅಧಿಕ ಮತಗಳ ಅಂತರದಿಂದ ಪ್ರಿಯಾಂಕಾ ಜಯ ಸಾಧಿಸಿದ್ದರು.

ಸಿಪಿಐ (ಎಂ) ನೇತೃತ್ವದ ಎಲ್ಡಿಎಫ್ನ ಸತ್ಯನ್ ಮೊಕೇರಿ ಅವರನ್ನು ಸೋಲಿಸಿದ್ದ ಪ್ರಿಯಾಂಕಾ ಆರು ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment