ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.
ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ಶಿಫಾರಸು ಮಾಡಿ ತೆಲಂಗಾಣ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಲಾಯಿತು.
ತೆಲಂಗಾಣ ವಿಧಾಸಭೆ ವಿಶೇಷ ಅಧಿವೇಶ ನಡೆಯುತ್ತಿದ್ದು, ಸೋಮವಾರ ನಡೆದ ಕಲಾಪದ ವೇಳೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ದೇಶದ ಅಭಿವೃದ್ಧಿ ಮತ್ತು ಅರ್ಥ ವ್ಯವಸ್ಥೆಗೆ ನೀಡಿದ ಕೊಡುಗೆ ಆಧರಿಸಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.