ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕಗೊಂಡಿದ್ದಾರೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಲಿ ನಿರ್ದೇಶಕ ಶಶಾಂಕ್ ದಾಸ್ ಅವರ ಅವಧಿ ಡಿಸೆಂಬರ್ ೧೧ಕ್ಕೆ ಮುಕ್ತಾಯಗೊಳ್ಳಲಿದೆ. ಬುಧವಾರ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ.
1190ರ ಐಎಎಸ್ ಬ್ಯಾಚ್ ಅಧಿಕಾರಿಯಾಗಿರುವ ಸಂಜಯ್ ಮಲ್ಹೋತ್ರಾ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದರು.
33 ವರ್ಷಗಳ ಅವಧಿಯಲ್ಲಿ ಸಂಜಯ್ ಮಲ್ಹೋತ್ರಾ, ಇಂಧನ, ಹಣಕಾಸು, ತೆರಿಗೆ, ಮಾಹಿತಿ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ಮಾಡಿದ ಅನುಭವ ಹೊಂದಿದ್ದಾರೆ.