Monday, 16 November 2026 — Kannadavahini
BREAKING NEWS
ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ
ದೇಶ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಶೂಟರ್ ಗಳಿಗೆ ಗನ್ ತಲುಪಿಸಿದ್ದ ಮಹಿಳೆಯರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 965 ವೀಕ್ಷಣೆಗಳು
tiger shroff

ನವದೆಹಲಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ದೆಹಲಿ ಪೊಲೀಸರ ವಿಶೇಷ ಘಟಕವು ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದೆ.

ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿರುವ ಗ್ಯಾಂಗ್‌ಸ್ಟರ್ ಅನಿಲ್ ಪಂಡಿತ್ ಎಂಬಾತನ ಸೂಚನೆಯ ಮೇರೆಗೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದ್ದು, ಶೂಟರ್ ಗಳಿಗೆ ಗನ್ ತಲುಪಿದ್ದ ಉತ್ತರ ಪ್ರದೇಶದ ರಾಧಾ (23) ಮತ್ತು ಬಬಿತಾ (23) ಅವರನ್ನು ಬಂಧಿಸಲಾಗಿದೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಶೂಟರ್ ಗಳನ್ನು ಮುಂಬೈಗೆ ಕರೆ ತಂದು ಸ್ಥಳದ ಮಹಜರು ನಡೆಸಲು ತೀರ್ಮಾನಿಸಲಾಗಿದೆ.

ಮಹಿಳೆಯರು ಗನ್ ಗಳನ್ನು ಅಮೃತಸರದಿಂದ ಮುಂಬೈಗೆ ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ತಲುಪಿಸಿದ್ದಾರೆ ಎಂದು ಶಂಕಿಸಲಾಗಿದೆ.

ಶೂಟರ್ ಗಳ ಪೈಕಿ ಒಬ್ಬನಾದ ಕುನಾಲ್ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ. ಹರ್ಸಾನಾ ಗ್ರಾಮದ ಸ್ನೇಹಿತನೊಬ್ಬ ಅವನನ್ನು ಅನಿಲ್ ಪಂಡಿತ್ ಎಂಬಾತನಿಗೆ ಪರಿಚಯಿಸಿದ್ದ. ನಂತರ ಎನ್‌ಕ್ರಿಪ್ಟ್ ಮಾಡಿದ (ಸುರಕ್ಷಿತ) ಮೆಸೇಜಿಂಗ್ ಅಪ್ಲಿಕೇಶನ್ ಮೂಲಕ ಪಂಡಿತ್‌ನೊಂದಿಗೆ ಸಂಪರ್ಕದಲ್ಲಿದ್ದ ಎಂದು ಅಧಿಕಾರಿ ಹೇಳಿದ್ದಾರೆ.

ಕುನಾಲ್ ಮತ್ತು ಅವನ ಸಹಚರ ಸುಮಿತ್ ಅಮೃತಸರದಿಂದ ಒಂದು ಪಿಸ್ತೂಲ್ ಮತ್ತು 20 ಸುತ್ತು ಮದ್ದುಗುಂಡುಗಳನ್ನು ಖರೀದಿಸಿದ್ದರು. ಸುಮಾರು ಎರಡು ತಿಂಗಳ ಹಿಂದೆ, ಕುನಾಲ್ ರಾಧಾ ಎಂಬಾಕೆಯನ್ನು ಭೇಟಿಯಾಗಿ ಆಕೆಯೊಂದಿಗೆ ಸಂಬಂಧ ಬೆಳೆಸಿದ್ದಾನೆ. ನಂತರ ಆತ ತನ್ನ ಚಟುವಟಿಕೆಗಳ ಬಗ್ಗೆ ಆಕೆಗೆ ತಿಳಿಸಿ, ಶಸ್ತ್ರಾಸ್ತ್ರವೊಂದನ್ನು ತೆಗೆದುಕೊಂಡು ಮುಂಬೈಗೆ ಹೋಗುವಂತೆ ಆಕೆಯನ್ನು ಒಪ್ಪಿಸಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಕ್ಟೋಬರ್ 15ರಂದು, ಕುನಾಲ್ ರಾಧಾ ಮತ್ತು ಆಕೆಯ ಸಹಚರಿ ಬಬಿತಾಳನ್ನು ನವದೆಹಲಿ ರೈಲು ನಿಲ್ದಾಣದಲ್ಲಿ ಬಿಟ್ಟಿದ್ದಾನೆ. ಪಿಸ್ತೂಲ್ ಅನ್ನು ರಾಧಾಳ ಬ್ಯಾಗ್‌ನಲ್ಲಿ ಅಡಗಿಸಿಡಲಾಗಿತ್ತು. ಪ್ರಯಾಣದುದ್ದಕ್ಕೂ ಕುನಾಲ್ ಅವರೊಂದಿಗೆ ಎನ್‌ಕ್ರಿಪ್ಟ್ ಮಾಡಿದ ಮೆಸೇಜಿಂಗ್ ಆ್ಯಪ್ ಮೂಲಕ ಸಂಪರ್ಕದಲ್ಲಿದ್ದು, ಪಂಡಿತ್ ನೀಡಿದ ಸೂಚನೆಗಳನ್ನು ಅವರಿಗೆ ತಲುಪಿಸುತ್ತಿದ್ದ ಎಂದು ಅಧಿಕಾರಿ ವಿವರಿಸಿದ್ದಾರೆ. ಈ ಇಬ್ಬರು ಮಹಿಳೆಯರು ಅಕ್ಟೋಬರ್ 17ರಂದು ಮುಂಬೈ ತಲುಪಿದರು. ದಾದರ್‌ನಲ್ಲಿ ರೈಲಿನಿಂದ ಇಳಿದ ನಂತರ, ಅವರು ಹೋಟೆಲ್​ಬೊಂದರಲ್ಲಿ ತಂಗಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ, ಅಪ್ರಾಪ್ತ ಬಾಲಕನೊಬ್ಬ ಅವರ ಹೋಟೆಲ್ ಬಳಿ ರಾಧಾಳಿಂದ ಬ್ಯಾಗ್ ಅನ್ನು ಪಡೆದುಕೊಂಡನೆಂದು ಆರೋಪಿಸಲಾಗಿದೆ.

ಮರುದಿನ ಸಂಜೆ 7 ಗಂಟೆ ಸುಮಾರಿಗೆ, ಶ್ರಾಫ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಮಾಹಿತಿ ಸಿಕ್ಕಿತು. ದಾಳಿಕೋರರು ಮುಂಬೈನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪಂಡಿತ್ ಕುನಾಲ್‌ಗೆ ತಿಳಿಸಿ, ಅವರು ಅಲ್ಲಿಂದ ತಪ್ಪಿಸಿಕೊಳ್ಳಲು ವ್ಯವಸ್ಥೆ ಮಾಡುವಂತೆ ಹೇಳಿದ್ದಾನೆ. ಅಕ್ಟೋಬರ್ 18ರಂದು ರಾಧಾ ಮತ್ತು ಬಬಿತಾ ‘ದಾದರ್-ಹರಿದ್ವಾರ ಎಕ್ಸ್‌ಪ್ರೆಸ್’ ರೈಲಿನಲ್ಲಿ ಮುಂಬೈನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8417 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment