Home ಕಾನೂನು ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ FIR ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ ಅನಗತ್ಯ: ಸುಪ್ರೀಂಕೋರ್ಟ್

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ FIR ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ ಅನಗತ್ಯ: ಸುಪ್ರೀಂಕೋರ್ಟ್

ನವದೆಹಲಿ: ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐಗೆ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

by Editor
0 comments
supreme court

ನವದೆಹಲಿ: ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐಗೆ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಭ್ರಷ್ಟಾಚಾರದ ಆರೋಪ ಸಂಬಂಧ ಆಂಧ್ರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ರದ್ದುಗೊಳಿದ್ದ ಆದೇಶವನ್ನೇ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಗಂಭೀರ ಆರೋಪವನ್ನು ಎದುರಿಸುತ್ತಿರುವಾಗ ಅವರು ಯಾವ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ಮುಖ್ಯವಾಗುವುದಿಲ್ಲ ಎಂದು ನ್ಯಾಯಮೂರ್ತಿ ಸಿಟಿ ರವಿಕುಮಾರ್ ಮತ್ತು ರಾಜೇಶ್ ಬಿಂದಲ್ ಅವರಿದ್ದ ನ್ಯಾಯಪೀಠ ಹೇಳಿದೆ.

ಏನಿದು ಪ್ರಕರಣ:

ಆಂಧ್ರಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರ ಸರ್ಕಾರಿ ನೌಕರರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದ್ದರಿಂದ ಚರ್ಚೆ ಮುನ್ನೆಲೆಗೆ ಬಂದಿತ್ತು.

banner

ಆಂಧ್ರ ಪ್ರದೇಶ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಅನುಮತಿ ಪಡೆಯದೆ ಸಿಬಿಐ ಎಫ್ಐಆರ್ ದಾಖಲಿಸುವ ಅಧಿಕಾರ ಪ್ರಶ್ನಿಸಿ ನೌಕರರು ಆಂಧ್ರಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದರು. 1946ರ ಡೆಲ್ಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ಪ್ರಕಾರ, ಅವಿಭಜಿತ ಆಂಧ್ರಪ್ರದೇಶ ವ್ಯಾಪ್ತಿಯಲ್ಲಿದ್ದ ನೌಕರರ ಮೇಲೆ ಸಿಬಿಐ ರಾಜ್ಯದ ಅನುಮತಿ ಪಡೆಯದೇ ಪ್ರಕರಣ ದಾಖಲಿಸಿದ್ದು ಸರಿಯಲ್ಲ ಎಂದು ಹೈಕೋರ್ಟ್ನಲ್ಲಿ ಆರೋಪಿಗಳು ವಾದ ಮಂಡಿಸಿದ್ದರು.

ಹೈಕೋರ್ಟ್ ನೀಡಿದ್ದ ತೀರ್ಪು:

ಆಂಧ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇಂದ್ರದ ನೌಕರರ ವಾದ ಪುರಸ್ಕರಿಸಿದ್ದ ಹೈಕೋರ್ಟ್ ಭ್ರಷ್ಟಾಚಾರ ತಡೆ ಕಾಯಿದೆಯಡಿ ದಾಖಲಿಸಿದ ಎಫ್ಐಆರ್ ಅನ್ನು ಮಜಾ ಗೊಳಿಸಿತ್ತು. 32 ಪುಟಗಳ ತೀರ್ಪಿನಲ್ಲಿ, ಸಿಬಿಐ ಪ್ರಕರಣದ ಕಲಿಸುವುದಕ್ಕೆ ಮುನ್ನ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು ಎಂದು ಉಲ್ಲೇಖಿಸಲಾಗಿತ್ತು.
ಆಂಧ್ರ ಪ್ರದೇಶ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ನಲ್ಲಿ ಐತಿಹಾಸಿಕ ತೀರ್ಪು ಪ್ರಕಟವಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಗರಿಷ್ಠ 85 ರೂ. ಟಿಕೆಟ್ ದರ ನಿಗದಿ? ಮಾರ್ಚ್ 1-8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಶಾಲೆಯಲ್ಲಿ ಕುಸಿದುಬಿದ್ದ ಅಸುನೀಗಿದ 3ನೇ ತರಗತಿ ವಿದ್ಯಾರ್ಥಿನಿ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಅರ್ಜಿ: ಮುಂದಿನ ವಾರದಿಂದ ಸುಪ್ರೀಂಕೋರ್ಟ್ ವಿಚಾರಣೆ! ರಾಷ್ಟ್ರಗೀತೆ ವಿವಾದ: ಅಧಿವೇಶನ ಭಾಷಣ ಮಾಡದೇ ಹೊರನಡೆದ ತಮಿಳುನಾಡು ರಾಜ್ಯಪಾಲ! BREAKING ಸೇನಾ ವಾಹನ ಸ್ಫೋಟಿಸಿದ ನಕ್ಸಲರು: 9 ಸಿಆರ್ ಪಿಎಫ್ ಯೋಧರು ಹುತಾತ್ಮ 29ನೇ ಹುಟ್ಟುಹಬ್ಬ ಆಚರಿಸಿಕೊಂಡ ಐಐಎಂ ವಿದ್ಯಾರ್ಥಿ ಮಹಡಿಯಿಂದ ಬಿದ್ದು ಸಾವು ಎಚ್ ಎಂವಿ ವೈರಸ್ ನಿಂದ ಜೀವಕ್ಕೆ ಅಪಾಯವಿಲ್ಲ, ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್ ಕರ್ನಾಟಕದ 6 ನಕ್ಸಲರು ಶರಣಾಗತಿ? ಕಾರ್ಯಾಚರಣೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ ಗುಜರಾತ್ ನಲ್ಲಿ ಎಚ್ ಎಂಪಿ ವಿ ವೈರಸ್ ಪತ್ತೆ: ಭಾರತಕ್ಕೆ 3ಕ್ಕೇರಿದ ಪ್ರಕರಣ