Thursday, December 25, 2025
Google search engine
Homeಕಾನೂನುರಾಜ್ಯಪಾಲರ ಅಧಿಕಾರ ವ್ಯಾಪ್ತಿ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟ

ರಾಜ್ಯಪಾಲರ ಅಧಿಕಾರ ವ್ಯಾಪ್ತಿ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟ

ವಿಧಾನಸಭೆ ಅಧಿವೇಶನದಲ್ಲಿ ಕೈಗಂಡ ತೀರ್ಮಾನಗಳನ್ನು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸದೇ ತಡೆಹಿಡಿಯುವ ಹಕ್ಕು ರಾಜ್ಯಪಾಲರಿಗೆ ಇಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ತಮಿಳುನಾಡು ಸರ್ಕಾರಕ್ಕೆ ಮಹತ್ವದ ಜಯ ಲಭಿಸಿದರೆ, ರಾಜ್ಯಪಾಲ ಆರ್.ಎನ್. ರವಿಗೆ ಭಾರೀ ಮುಖಭಂಗ ಉಂಟಾಗಿದೆ.

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ವಿಧಾನಸಭೆಯಲ್ಲಿ ಅಂಗೀಕಾರವಾದ 10 ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡದೇ ತಡೆ ಹಿಡಿದಿದ್ದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.

ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ಮಂಗಳವಾರ ರಾಜ್ಯಪಾಲರ ಅಧಿಕಾರ ವ್ಯಾಪ್ತಿ ಕುರಿತು ಮಹತ್ವದ ತೀರ್ಪು ಪ್ರಕಟಿಸಿದೆ.

ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಅನುಮತಿಗೆ ಕಳುಹಿಸದೇ ತಡೆ ಹಿಡಿಯುವ ಹಕ್ಕು ರಾಜ್ಯಪಾಲರಿಗೆ ಇಲ್ಲ. ರಾಜ್ಯಪಾಲರ ಈ ರೀತಿಯ ಕ್ರಮ ಕಾನೂನು ಬಾಹಿರ ಹಾಗೂ ಅಧಿಕಾರ ವ್ಯಾಪ್ತಿಮೀರಿದ್ದಾಗಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.

ಸದನದಲ್ಲಿ ಅಂಗೀಕರಿಸಿದ ಮಸೂದೆಯನ್ನು ತಮ್ಮ ಮುಂದೆ ಮಂಡಿಸಿದಾಗ ರಾಜ್ಯಪಾಲರು ತಮ್ಮ ಒಪ್ಪಿಗೆ ನೀಡಬಹುದು, ಒಪ್ಪಿಗೆಯನ್ನು ತಡೆಹಿಡಿಯಬಹುದು ಅಥವಾ ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಬಹುದು. ರಾಜ್ಯಪಾಲರು ಕೆಲವು ನಿಬಂಧನೆಗಳ ಮರುಪರಿಶೀಲನೆಗಾಗಿ ಮಸೂದೆಯನ್ನು ಸದನ ಅಥವಾ ಸದನಗಳಿಗೆ ಹಿಂತಿರುಗಿಸಬಹುದು. ಸದನವು ಅದನ್ನು ಮತ್ತೆ ಅಂಗೀಕರಿಸಿದರೆ ರಾಜ್ಯಪಾಲರು ಒಪ್ಪಿಗೆ ತಡೆಹಿಡಿಯಬಾರದು. ಸಂವಿಧಾನ, ರಾಜ್ಯ ನೀತಿಯ ನಿರ್ದೇಶನ ತತ್ವಗಳು ಅಥವಾ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಕ್ಕೆ ವಿರುದ್ಧವಾಗಿದೆ ಎಂದು ಅನಿಸುವ ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ರಾಜ್ಯಪಾಲರು ಮಸೂದೆಗೆ ಒಪ್ಪಿಗೆಯನ್ನು ತಡೆಹಿಡಿಯಲು ಮತ್ತು ಮಂತ್ರಿ ಮಂಡಳಿಯ ಸಹಾಯ ಮತ್ತು ಸಲಹೆ ಯೊಂದಿಗೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಲು ನ್ಯಾಯಾಲಯವು ಒಂದು ತಿಂಗಳ ಗಡುವನ್ನು ನಿಗದಿಪಡಿಸಿದೆ. ಸಚಿವ ಸಂಪುಟದ ಸಹಾಯ ಮತ್ತು ಸಲಹೆಯಿಲ್ಲದೆ ಮಸೂದೆಯನ್ನು ಕಾಯ್ದಿರಿಸಿದಾಗ ಈ ಗಡುವು ಮೂರು ತಿಂಗಳು ಗಳಾಗಿರುತ್ತದೆ. ರಾಜ್ಯ ವಿಧಾನಸಭೆಯಿಂದ ಪುನರ್ವಿಮರ್ಶೆಯ ನಂತರ ಮಸೂದೆಯನ್ನು ರಾಜ್ಯಪಾಲರಿಗೆ ಮಂಡಿಸಿ ದರೆ ಅವರು ಒಂದು ತಿಂಗಳೊಳಗೆ ಅದನ್ನು ಅಂಗೀಕರಿಸಬೇಕು. 200 ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಮಾಡುವ ಯಾವುದೇ ಕೆಲಸವೂ ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುತ್ತದೆ ಎಂದು ಕೋರ್ಟ್‌ ಹೇಳಿದೆ.

ಯಾವುದೇ ರೀತಿಯಲ್ಲಿ ರಾಜ್ಯಪಾಲರ ಅಧಿಕಾರವನ್ನು ದುರ್ಬಲಗೊಳಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ರಾಜ್ಯಪಾಲರ ಎಲ್ಲಾ ಕ್ರಮಗಳು ಸಂಸದೀಯ ಪ್ರಜಾಪ್ರಭುತ್ವದ ತತ್ವಕ್ಕೆ ಹೊಂದಿಕೆಯಾಗಬೇಕು. ಕೇಂದ್ರ ತನಿಖಾ ದಳ ದಲ್ಲಿಯೂ ಕೆಲಸ ಮಾಡಿರುವ ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್.ರವಿ 2021 ರಲ್ಲಿ ತಮಿಳುನಾಡು ರಾಜ್ಯಪಾಲ ರಾಗಿ ಅಧಿಕಾರ ವಹಿಸಿಕೊಂಡರು. ಸಂವಿಧಾನವು ಶಾಸನಕ್ಕೆ ತಮ್ಮ ಒಪ್ಪಿಗೆಯನ್ನು ತಡೆಹಿಡಿಯಲು ಅವರಿಗೆ ಅಧಿಕಾರ ನೀಡುತ್ತದೆ ಎಂದು ಅವರು ಹೇಳಿದ್ದರು.

ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಈ ತೀರ್ಪನ್ನು ಐತಿಹಾಸಿಕ ಎಂದು ಬಣ್ಣಿಸಿ ದ್ದಾರೆ. ಇದು ತಮಿಳುನಾಡಿಗೆ ಮಾತ್ರವಲ್ಲ, ಎಲ್ಲಾ ಭಾರತೀಯ ರಾಜ್ಯಗಳಿಗೆ ದೊಡ್ಡ ಗೆಲುವು. ಡಿಎಂಕೆ ರಾಜ್ಯದ ಸ್ವಾಯ ತ್ತತೆ ಮತ್ತು ಫೆಡರಲ್ ರಾಜಕೀಯಕ್ಕಾಗಿ ಹೋರಾಡುವುದನ್ನು ಮತ್ತು ಗೆಲ್ಲುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments