Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಅಡುಗೆ ಅನಿಲ 29 ರೂ. ಏರಿಕೆ: ನಮ್ಮಲ್ಲೇ ಕಡಿಮೆ ಎಂದ ಕೇಂದ್ರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 45 ವೀಕ್ಷಣೆಗಳು

ನವದೆಹಲಿ: ದೇಶೀಯ ಅಡುಗೆ ಅನಿಲ ಎಲ್‌ಪಿಜಿ ದರ ಪ್ರತಿ ಸಿಲಿಂಡರ್‌ಗೆ 29 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದು ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರದಲ್ಲಿ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ದರ ಏರಿಕೆಯಾಗಿದೆ.

ಜಾಗತಿಕ ಇಂಧನ ವೆಚ್ಚದಲ್ಲಿ ಏರಿಕೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಅಡುಗೆ ಅನಿಲ ದರ ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಜೂನ್ 7ರಿಂದ ಜಾರಿಗೆ ಬರುವಂತೆ 913 ರೂ.ಗಳಿಂದ 942 ರೂ.ಗಳಿಗೆ ಏರಿಕೆಯಾಗಲಿದೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ಜಾಗತಿಕ ಇಂಧನ ಪೂರೈಕೆಗೆ ವ್ಯತ್ಯಯ ಉಂಟು ಮಾಡಿದ ಬಳಿಕ ಹಾಗೂ ಅಂತಾರಾಷ್ಟ್ರೀಯ ಇಂಧನ ಬೆಲೆಗಳಲ್ಲಿ ಏರಿಕೆಯಾದ ಬೆನ್ನಲ್ಲೇ ಮಾರ್ಚ್ 7ರಂದು ಸಿಲಿಂಡರ್‌ಗೆ 60 ರೂ.ಗಳಷ್ಟು ಹೆಚ್ಚಳ ಮಾಡಲಾಗಿತ್ತು.

ದೇಶೀಯ ಎಲ್‌ಪಿಜಿ ಮಾರಾಟದ ಮೇಲಿನ ನಷ್ಟವನ್ನು ಈ ಹೆಚ್ಚಳವು ಭಾಗಶಃ ಸರಿದೂಗಿಸಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ. ಇತ್ತೀಚೆಗೆ, ಜೂನ್ 01ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯು ದೆಹಲಿಯಲ್ಲಿ 42 ರೂ.ಗಳಷ್ಟು ಮತ್ತು ಕೋಲ್ಕತ್ತಾದಲ್ಲಿ 53.50 ರೂ.ಗಳಷ್ಟು ಏರಿಕೆಯಾಗಿತ್ತು.

ಇಂದಿನ ದರ ಪರಿಷ್ಕರಣೆಗೂ ಮುನ್ನ, ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟವಾಗುವ ಪ್ರತಿ ಎಲ್‌ಪಿಜಿ ಸಿಲಿಂಡರ್‌ ಮೇಲೆ ಸುಮಾರು 703 ರೂ.ಗಳಷ್ಟು ನಷ್ಟ ಅನುಭವಿಸುತ್ತಿವೆ ಎಂದು ಅಂದಾಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ಇಂಧನ ಬೆಲೆ ಹೆಚ್ಚಳದ ಮಧ್ಯೆ ಮತ್ತೆ ಎಲ್‌ಪಿಜಿ ದರ ಏರಿಕೆಯಾಗಿದೆ.

ಮೇ ಮಧ್ಯ ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್‌ಗೆ ಒಟ್ಟು 7.50 ರೂ.ಗಳಷ್ಟು ಏರಿಕೆಯಾಗಿವೆ. ಅಲ್ಲದೆ, ನೈಸರ್ಗಿಕ ಅನಿಲ (ಸಿಎನ್‌ಜಿ) ದರಗಳು ಪ್ರತಿ ಕೆಜಿಗೆ ಸುಮಾರು 6 ರೂ.ಗಳಷ್ಟು ಹೆಚ್ಚಾಗಿತ್ತು.

ಜಗತ್ತಿನಲ್ಲೇ ಕಡಿಮೆ ದರ

ಪಶ್ಚಿಮ ಏಷ್ಯಾದಲ್ಲಿನ ಅಡೆತಡೆಗಳಿಂದಾಗಿ ಅಂತಾರಾಷ್ಟ್ರೀಯ ಎಲ್‌ಪಿಜಿ ಬೆಲೆಗಳಲ್ಲಿ ತೀವ್ರ ಏರಿಕೆಯ ಹೊರತಾಗಿಯೂ, ಭಾರತೀಯ ಕುಟುಂಬಗಳು ಅಡುಗೆ ಅನಿಲಕ್ಕೆ ಜಗತ್ತಿನಲ್ಲೇ ಕಡಿಮೆ ದರ ಪಾವತಿಸುತ್ತಿವೆ. ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಏರಿಕೆ ನಂತರವೂ ನಮ್ಮಲ್ಲಿನ ದೇಶೀಯ ಎಲ್‌ಪಿಜಿ ದರವು ನೆರೆಯ ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿನ ಬೆಲೆಗಳಿಗಿಂತ ಕಡಿಮೆಯಾಗಿವೆ. ಅಲ್ಲದೆ, ಯುನೈಟೆಡ್ ಸ್ಟೇಟ್ಸ್, ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಮುಂದುವರೆದ ದೇಶಗಳ ಬೆಲೆಗಳಿಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

ಬಿಕ್ಕಟ್ಟಿನ ಸಮಯದಲ್ಲಿ ಹಾರ್ಮುಜ್ ಜಲಸಂಧಿಯ ಮೂಲಕ ನಿರಂತರ ಇಂಧನ ಸಾಗಣೆ ಸಾಧ್ಯವಾಗುತ್ತಿರುವ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಇದರಿಂದ ದೇಶದಲ್ಲಿ ಎಲ್‌ಪಿಜಿ ಅಥವಾ ಇತರ ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ. ಎಲ್ಲರೂ ಸಹ 942 ರೂ.ಗಳಿಗೆ ಅಗತ್ಯವಿರುವಷ್ಟು ಸಿಲಿಂಡರ್‌ಗಳನ್ನು ಖರೀದಿಸಬಹುದು ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment