ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಭಾವೊ ಸುಬಿಯಾಂಟೊ ಪಾಲ್ಗೊಳ್ಳಲಿದ್ದಾರೆ.
ಕೇಂದ್ರ ಸರ್ಕಾರ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿರುವ ಗಣ್ಯರ ಪಟ್ಟಿಯನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದ್ದು, ಮೂಲಗಳ ಪ್ರಕಾರ ಇಂಡೋನೇಷ್ಯಾದ ಅಧ್ಯಕ್ಷರಾಗಿ 2024 ಅಕ್ಟೋಬರ್ ನಲ್ಲಿ ಅಧಿಕಾರ ಸ್ವೀಕರಿಸಿದ 73 ವರ್ಷದ ಮಾಜಿ ಸೇನಾಧಿಕಾರಿ ಸುಬಿಯಾಂಟೊ ಪಾಲ್ಗೊಳ್ಳಲಿದ್ದಾರೆ.
ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ವೇಳೆ ಸುಬಿಯಾಂಟೊ ಪ್ರಧಾನಿ ನರೇಂದ್ರ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಕಳೆದ ಜೂನ್ ತಿಂಗಳಲ್ಲಿ ಸುಬಿಯಾಂಟೊಗೆ ಕರೆ ಮಾಡಿದ್ದ ಪ್ರಧಾನಿ ಮೋದಿ, ಎರಡು ರಾಜ್ಯಗಳ ನಡುವಿನ ಸಂಬಂಧ ವೃದ್ಧಿಸುವ ಕುರಿತು ಚರ್ಚೆ ನಡೆಸಿದ್ದರು ಎಂದು ಹೇಳಲಾಗಿದೆ.