Sunday, December 7, 2025
Google search engine
Homeದೇಶಕೇಂದ್ರದ ಆಡಳಿತದ ವೇಗ 3 ಪಟ್ಟು ವೃದ್ಧಿಸಿದೆ: ರಾಷ್ಟ್ರಪತಿ ದ್ರೌಪದಿ ಮರ್ಮು

ಕೇಂದ್ರದ ಆಡಳಿತದ ವೇಗ 3 ಪಟ್ಟು ವೃದ್ಧಿಸಿದೆ: ರಾಷ್ಟ್ರಪತಿ ದ್ರೌಪದಿ ಮರ್ಮು

ಕೇಂದ್ರ ಸರ್ಕಾರ ಹಿಂದಿನ ಎರಡು ಬಾರಿಯ ಆಡಳಿತ ಈ ಬಾರಿ ಮೂರು ಪಟ್ಟು ಹೆಚ್ಚು ವೃದ್ಧಿಸಿದೆ. ಅಭಿವೃದ್ಧಿ ಕೆಲಸಗಳು ತೀವ್ರಗತಿಯಲ್ಲಿ ನಡೆಯುತ್ತಿವೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ತಿಳಿಸಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ದಿನವಾದ ಶುಕ್ರವಾರ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಹಲವು ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರ ಉತ್ತಮ ಸಾಧನೆ ಮಾಡಿದೆ ಎಂದರು.

ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ಅವರು ಹೇಳಿದರು.

ದೇಶದ ವಾಯುಯಾನ ವಲಯವು ವೇಗವಾಗಿ ಪ್ರಗತಿ ಸಾಧಿಸುತ್ತಿದೆ, ವಿಮಾನಯಾನ ಕಂಪನಿಗಳು 1,700 ಹೊಸ ವಿಮಾನಗಳಿಗೆ ಆರ್ಡರ್ ನೀಡುತ್ತಿವೆ. ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆ ಪೂರ್ಣಗೊಂಡಿದೆ. ಈಗ ದೇಶವನ್ನು ಕಾಶ್ಮೀರದಿಂದ ಕನ್ಯಾಕುಮಾರಿಗೆ ರೈಲು ಮಾರ್ಗದ ಮೂಲಕ ಸಂಪರ್ಕಿಸಲಾಗುವುದು ಎಂದು ಅವರು ವಿವರಿಸಿದರು.

ಸೈಬರ್ ಭದ್ರತೆಯಲ್ಲಿ ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಡಿಜಿಟಲ್ ವಂಚನೆ, ಸೈಬರ್ ಅಪರಾಧ ಮತ್ತು ಡೀಪ್‌ಫೇಕ್ ಸಾಮಾಜಿಕ, ಹಣಕಾಸು ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಸವಾಲುಗಳಾಗಿವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments