Wednesday, December 24, 2025
Google search engine
Homeದೇಶದೇಶದಲ್ಲಿ ಡಿಜಿಟಲ್ ಜನಗಣತಿಗೆ 11,718 ಕೋಟಿಗೆ ಕೇಂದ್ರ ಸಚಿವ ಸಂಪುಟ ಅಸ್ತು

ದೇಶದಲ್ಲಿ ಡಿಜಿಟಲ್ ಜನಗಣತಿಗೆ 11,718 ಕೋಟಿಗೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ದೇಶಾದ್ಯಂತ ಇದೇ ಮೊದಲ ಬಾರಿಗೆ ನಡೆಯಲಿರುವ 2027ರ ಜನಗಣತಿಗೆ 11,718 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ದತ್ತಾಂಶಗಳು ಡಿಜಿಟಲ್ ಮಾದರಿಯಲ್ಲಿ ಸಂಗ್ರಹಿಸಲಾಗುವುದು.

ಸಂಪುಟ ಸಭೆಯ ನಂತರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಜನಗಣತಿಗಾಗಿ ಮೂರು ಲಕ್ಷ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಾಗುವುದು ಎಂದರು.

ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು. ಮೊದಲ ಹಂತದಲ್ಲಿ, ಮನೆ ಪಟ್ಟಿ ಮತ್ತು ವಸತಿ ಗಣತಿ ನಡೆಯಲಿದೆ, ಇದನ್ನು ಏಪ್ರಿಲ್ ನಿಂದ ಸೆಪ್ಟೆಂಬರ್ 2026 ರವರೆಗೆ ನಡೆಸಲಾಗುವುದು, ಎರಡನೇ ಹಂತದಲ್ಲಿ, ಜನಸಂಖ್ಯಾ ಗಣತಿ ನಡೆಯಲಿದೆ, ಇದನ್ನು ಫೆಬ್ರವರಿ 2027 ರಿಂದ ನಡೆಸಲಾಗುವುದು ಎಂದು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments