Wednesday, November 12, 2025
Google search engine
Homeದೇಶಬಗೆಹರಿಯದ ಬಿಕ್ಕಟ್ಟು: ನಾಳೆ ಮಹಾರಾಷ್ಟ್ರದ ಅರ್ಧಂಬರ್ಧ ಸಂಪುಟ ವಿಸ್ತರಣೆ!

ಬಗೆಹರಿಯದ ಬಿಕ್ಕಟ್ಟು: ನಾಳೆ ಮಹಾರಾಷ್ಟ್ರದ ಅರ್ಧಂಬರ್ಧ ಸಂಪುಟ ವಿಸ್ತರಣೆ!

ಮುಂಬೈ: ಮಹಾರಾಷ್ಟ್ರ ಮಹಾಯುತಿ ಸರ್ಕಾರದಲ್ಲಿ ಬಿಕ್ಕಟ್ಟು ಬಗೆಹರಿಯದ ಹಿನ್ನೆಲೆಯಲ್ಲಿ ಡಿಸೆಂಬರ್ 15ರಂದು ಭಾನುವಾರ ನಾಗಪುರದಲ್ಲಿ 15ರಿಂದ 30 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ನಡೆಯಲಿದ್ದು, ಮೂಲಗಳ ಪ್ರಕಾರ 15 ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಮತ್ತೊಂದು ಮೂಲದ ಪ್ರಕಾರ ಸುಮಾರು 30 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಮಹಾರಾಷ್ಟ್ರದ ಎರಡನೇ ರಾಜಧಾನಿಯಾಗಿರುವ ನಾಗಪುರದಲ್ಲಿ ಡಿಸೆಂಬರ್ 16ರಿಂದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿ ತರಾತುರಿಯಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ.

ಡಿಸೆಂಬರ್ 5ರಂದು ಮುಂಬೈಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಮಹಾಯುತಿ ಮೈತ್ರಿ ಪಕ್ಷಗಳ ನಡುವಿನ ಅಧಿಕಾರ ಹಂಚಿಕೆಯಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗಿದೆ.

ಮತ್ತೊಂದೆಡೆ ಗೃಹ ಖಾತೆಗಾಗಿ ಏಕನಾಥ್ ಶಿಂಧೆ ಪಟ್ಟು ಹಿಡಿದಿದ್ದಾರೆ ಎಂಬಂತಹ ಮಾತುಗಳು ಕೇಳಿಬಂದಿದ್ದವು. ಕೊನೆಗೂ ಅಧಿಕಾರ ಹಂಚಿಕೆಯನ್ನು ಬಿಜೆಪಿ, ಶಿವಸೇನಾ (ಶಿಂಧೆ ಬಣ) ಹಾಗೂ ಎನ್ ಸಿಪಿ ಪಕ್ಷಗಳು ಒಪ್ಪಿಕೊಂಡಿದ್ದು, ಭಾನುವಾರ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ಮಹಾರಾಷ್ಟ್ರ ಕ್ಯಾಬಿನೆಟ್ ನಲ್ಲಿ ಗರಿಷ್ಠ 43 ಸದಸ್ಯರನ್ನು ಹೊಂದಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments