Home ಕಾನೂನು ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಕಾಯ್ದೆ `ಕ್ರೂರ’: ಸುಪ್ರೀಂಕೋರ್ಟ್ ಚಾಟಿ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಕಾಯ್ದೆ `ಕ್ರೂರ’: ಸುಪ್ರೀಂಕೋರ್ಟ್ ಚಾಟಿ

by Editor
0 comments
yogi adithyanath

ನವದೆಹಲಿ: ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಮತ್ತು ಸಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯು ‘ಕ್ರೂರ’ವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು (ಬುಧವಾರ) ಅಭಿಪ್ರಾಯಪಟ್ಟಿತು.

ಈ ಕಾಯ್ದೆಯಡಿ ತನ್ನ ವಿರುದ್ಧ ಪ್ರಕರಣ ದಾಖಲಾದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಕಾಯ್ದೆಯಡಿ ಕಾಸ್‌ಗಂಜ್‌ನ ಜಿಲ್ಲಾ ನ್ಯಾಯಾಲಯದಲ್ಲಿ ತನ್ನ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಆದರೆ ಈ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮೇ ೨೦೨೩ರಲ್ಲಿ ತಿರಸ್ಕರಿಸಿತ್ತು. ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

“ಈ ಕಾಯ್ದೆ ಕ್ರೂರವಾಗಿದೆ ಎಂದು ನಮಗೆ ಅನಿಸುತ್ತಿರುವುದರಿಂದ ನಾವು ಈ ಬಗ್ಗೆ ವಿಚಾರಣೆ ನಡೆಸುತ್ತೇವೆ” ಎಂದು ಹೇಳಿದ ಸುಪ್ರೀಂ ಕೋರ್ಟ್ ಮೇಲ್ಮನವಿಯನ್ನು ಅಂಗೀಕರಿಸಿದೆ.

banner

ಯುಪಿ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ್ದ ಸುಪ್ರೀಂ ಕೋರ್ಟ್: ಕಳೆದ ವರ್ಷ ನವೆಂಬರ್ನಲ್ಲಿ ಈ ಪ್ರಕರಣದ ವಿಚಾರಣೆಯ ವೇಳೆ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಅಲ್ಲದೆ ಅರ್ಜಿದಾರರ ವಿರುದ್ಧ ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಮಧ್ಯಂತರ ಆದೇಶ ನೀಡಿತ್ತು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ದಾಂಪತ್ಯಕ್ಕೆ ಕಾಲಿಟ್ಟ ನಾಗಚೈತನ್ಯ-ಶೋಭಿತಾ 55 ವರ್ಷದಲ್ಲೇ 2ನೇ ಬಾರಿ ತೆಲಂಗಾಣದಲ್ಲಿ ಪ್ರಬಲ ಭೂಕಂಪನ! ಸಾರ್ವಜನಿಕ ಸ್ಥಳದಲ್ಲಿ ಗೋಮಾಂಸ ಸೇವನೆ ನಿಷೇಧಿಸಿದ ಅಸ್ಸಾಂ ಸರ್ಕಾರ! Kabaddi ಪ್ರೊ.ಕಬಡ್ಡಿ ಲೀಗ್: ಗುಜರಾತ್ ಎದುರು ಬೆಂಗಳೂರು ರೋಚಕ ಟೈ ದೇಶದಲ್ಲಿ 9 ತಿಂಗಳಲ್ಲಿ 6.32 ಲಕ್ಷ ಮಂದಿಗೆ 485 ಕೋಟಿ ರೂ. ಯುಪಿಐ ವಂಚನೆ! ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಕಾಯ್ದೆ `ಕ್ರೂರ’: ಸುಪ್ರೀಂಕೋರ್ಟ್ ಚಾಟಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ನಾಳೆ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ಕೆಜಿಎಫ್‌ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಚಿವ ಬೈರತಿ ಸುರೇಶ ಸೂಚನೆ ಅಡಿಲೇಡ್ ನಲ್ಲಿ ಭಾರತೀಯ ಕ್ರಿಕೆಟಿಗರಿಗೆ ಅಪಮಾನ: ನೆಟ್ ಅಭ್ಯಾಸ ವೀಕ್ಷಣೆಗೆ ನಿರ್ಬಂಧ! Baba Vanga prediction: 2025ರಲ್ಲಿ ದುರಂತಗಳ ಸರಮಾಲೆ ನಡೆಯಲಿದೆ: ಬಾಬಾ ವಂಗಾ ಸ್ಫೋಟಕ ಭವಿಷ್ಯ