Thursday, December 11, 2025
Google search engine
Homeದೇಶಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಮೂರು ವರ್ಷಗಳ ಹಿಂದೆಯಷ್ಟೇ ಮದುವೆ ಆಗಿದ್ದ 25 ವರ್ಷದ ಮಹಿಳೆಗೆ ಮೂರು ಮಕ್ಕಳಿದ್ದಾರೆ. ನವೆಂಬರ್ 4ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೊದಲಿನಿಂದಲೂ ಇರುವೆ ಭಯ ಇತ್ತು ಎಂದು ಹೇಳಲಾಗಿದೆ.

ಬಾಲ್ಯದಿಂದಲೂ ಇರುವೆಗೆ ಭಯಪಡುತ್ತಿದ್ದ ಮಹಿಳೆ ಮನೆಯಲ್ಲಿ ಸೀರೆಯಲ್ಲಿ ನೇಣುಬಿಗಿದಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಚೇರಿಯಲ್​ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋಗಿದ್ದಳು. ಮನೆ ಸ್ವಚ್ಛಗೊಳಿಸಿದ ನಂತರ ಕರೆದುಕೊಂಡು ಹೋಗುವುದಾಗಿ ಹೇಳಿದ್ದಳು.

ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ಪತಿ ಸಂಜೆ ಹಿಂದಿರುಗಿದಾಗ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಅವರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಸ್ಥಳದಲ್ಲಿ ಸಿಕ್ಕಿ ಆತ್ಮಹತ್ಯಾ ಪತ್ರದಲ್ಲಿ ಕ್ಷಮಿಸಿ ನಾನು ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ, ಜಾಗರೂಕರಾಗಿರಿ ಎಂದು ಬರೆದಿದ್ದಳು.

ಆಕೆ ಮನೆಯನ್ನು ಶುಚಿಗೊಳಿಸುವಾಗ ಇರುವೆಗಳನ್ನು ನೋಡಿರಬಹುದು ಮತ್ತು ಭಯದಿಂದ ಈ ತಪ್ಪು ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅಮೀನ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments