ಲಕ್ನೊ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ನಡುವೆ ಸೀಟು ಹಂಚಿಕೆ ಮೂರನೇ ದಿನವೂ ಅಂತಿಮ ನಿರ್ಧಾರಕ್ಕೆ ಬರಲು ವಿಫಲವಾಗಿದೆ.
ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಕಳೆದ ಮೂರು ದಿನಗಳಿಂದ ಸೀಟು ಹಂಚಿಕೆ ಚರ್ಚೆ ನಡೆಸಿವೆ. ಆರಂಭದಲ್ಲಿ 130 ಸೀಟುಗಳಿಗೆ ಬೇಡಿಕೆ ಇಟ್ಟಿದ್ದ ಕಾಂಗ್ರೆಸ್ 80 ಸ್ಥಾನಕ್ಕೆ ಇಳಿದಿದೆ.
ಮಾತುಕತೆ ನಂತರ ಮಾತನಾಡಿದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮಾತುಕತೆ ಸೌಹಾರ್ದವಾಗಿ ನಡೆಯುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ನಾವು ಅಂತಿಮ ನಿರ್ಧಾರಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.
