Thursday, 12 November 2026 — Kannadavahini
BREAKING NEWS
ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ
ರಾಜ್ಯ

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 29 ವೀಕ್ಷಣೆಗಳು
prahlad joshi

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವು ಪ್ರಮುಖ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿದ್ದು, ವಿಶ್ವವೇ ಅದರ ಪ್ರಗತಿ ಮತ್ತು ಬೆಳೆಯುತ್ತಿರುವ ಆಕಾಂಕ್ಷೆಗಳನ್ನು ಗಮನಿಸುತ್ತಿದೆ ಎಂದು ಕೇಂದ್ರ ನೂತನ ಮತ್ತು ನವೀಕರಿಸಬಹುದಾದ ಇಂಧನ, ಶಿಕ್ಷಣ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು

ನವದೆಹಲಿಯಲ್ಲಿ ನಡೆದ ‘ಭಾರತ್ ನವೀಕರಿಸಬಹುದಾದ ಇಂಧನ ಶೃಂಗಸಭೆ 2026’ರ ಸಮಾರೋಪ ಸಮಾರಭದ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ್ ಮಂಟಪವು, ಜಗತ್ತಿನಾದ್ಯಂತದ ಜಾಗತಿಕ ನೀತಿ ನಿರೂಪಕರು, ಹೂಡಿಕೆದಾರರು, ಉದ್ಯಮ ನಾಯಕರು ಮತ್ತು ಆವಿಷ್ಕಾರಕರನ್ನು ಒಂದೆಡೆ ತಂದಿದೆ ಎಂದರು.

135ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯೊಂದಿಗೆ, ಈ ಶೃಂಗಸಭೆಯು ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಅತ್ಯಂತ ದೊಡ್ಡ ಜಾಗತಿಕ ವೇದಿಕೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ನವೀಕರಿಸಬಹುದಾದ ಇಂಧನ ವಲಯದ ಮೂರು ಪ್ರಮುಖ ಕಾರ್ಯಕ್ರಮಗಳನ್ನು ಒಟ್ಟಿಗೆ ಆಯೋಜಿಸಿರುವುದು ಇದೇ ಮೊದಲ ಬಾರಿಯಾಗಿದ್ದು, ದೇಶೀಯ ಮತ್ತು ಅಂತಾರಾಷ್ಟ್ರೀಯ ಪಾಲುದಾರರ ಅಭೂತಪೂರ್ವ ಭಾಗವಹಿಸುವಿಕೆಯು ಭಾರತದ ನವೀಕರಿಸಬಹುದಾದ ಇಂಧನ ಬೆಳವಣಿಗೆಯ ಯಶೋಗಾಥೆಯ ಮೇಲಿನ ಜಾಗತಿಕ ವಿಶ್ವಾಸವನ್ನು ತೋರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಶೃಂಗಸಭೆಯನ್ನು, ಸನ್ಮಾನ್ಯ ಪ್ರಧಾನಮಂತ್ರಿಯವರು ನವೆಂಬರ್ 2, 2026 ರಂದು ಉದ್ಘಾಟಿಸಿದ್ದರು. ತಮ್ಮ ಭಾಷಣದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರು, ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಉಂಟಾದ ಜಾಗತಿಕ ಅಡಚಣೆಗಳಿಗೆ ದೇಶದ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವಲ್ಲಿ ಭಾರತವು ನವೀಕರಿಸಬಹುದಾದ ಇಂಧನದಲ್ಲಿ ಮಾಡಿದ ನಿರಂತರ ಹೂಡಿಕೆಗಳ ಕಾರ್ಯತಂತ್ರದ ಮಹತ್ವವದ ಬಗ್ಗೆ ಒತ್ತಿ ಹೇಳಿದರು. ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಹೂಡಿಕೆಯು ದೇಶವನ್ನು ಈ ಅಡಚಣೆಗಳಿಂದ ಹೆಚ್ಚಾಗಿ ರಕ್ಷಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತದ ನವೀಕರಿಸಬಹುದಾದ ಇಂಧನ ಪಯಣವು ತನ್ನ ದೇಶೀಯ ಇಂಧನ ಚಿತ್ರಣವನ್ನು ಬದಲಾಯಿಸುವುದು ಮಾತ್ರವಲ್ಲದೆ, ಜಗತ್ತಿಗೆ ಪ್ರಯೋಜನಕಾರಿಯಾಗಬಲ್ಲ ಪರಿಹಾರಗಳು ಮತ್ತು ಅನುಭವಗಳನ್ನು ಸೃಷ್ಟಿಸುತ್ತಿದೆ ಎಂದು ಸನ್ಮಾನ್ಯ ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ತಮ್ಮ ಆವಿಷ್ಕಾರಗಳು ಮತ್ತು ಸಾಧನೆಗಳನ್ನು ಮಾನವಕುಲದೊಂದಿಗೆ ಹಂಚಿಕೊಳ್ಳುವ ಭಾರತದ ಬದ್ಧತೆಯನ್ನು ಶ್ಲಾಘಿಸಿದ ಅವರು, ಪ್ರಪಂಚದಾದ್ಯಂತದ ದೇಶಗಳಲ್ಲಿ ಇಂಧನ ಪರಿವರ್ತನೆಯನ್ನು ಬೆಂಬಲಿಸಲು ಭಾರತದ ಶುದ್ಧ ಇಂಧನ ಯಶಸ್ಸಿನ ಸಾಮರ್ಥ್ಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಶುದ್ಧ ಇಂಧನ ಆವಿಷ್ಕಾರ ವ್ಯವಸ್ಥೆಯಲ್ಲಿ ಹೆಚ್ಚಿನ ಭಾಗವಹಿಸುವಿಕೆಗೆ ಕರೆ ನೀಡಿದ ಪ್ರಧಾನಮಂತ್ರಿಯವರು, ಶುದ್ಧ ಇಂಧನವನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆಯ ಗೃಹಬಳಕೆಯ ಇಂಧನ ಅಗತ್ಯಗಳನ್ನು ಪೂರೈಸುವಂತಹ ಪರಿಹಾರಗಳು ಮತ್ತು ವ್ಯವಹಾರ ಮಾದರಿಗಳನ್ನು ಅಭಿವೃದ್ಧಿಪಡಿಸಲು ಸ್ಟಾರ್ಟ್‌ಅಪ್‌ಗಳು, ಐಐಟಿಗಳು, ಆವಿಷ್ಕಾರಕರು ಮತ್ತು ಉದ್ಯಮಿಗಳಿಗೆ ಆಹ್ವಾನ ನೀಡಿದರು.

ನವೆಂಬರ್ 2 ರಿಂದ 5 ರವರೆಗೆ ಆಯೋಜಿಸಲಾದ ಈ ನಾಲ್ಕು ದಿನಗಳ ಶೃಂಗಸಭೆಯು ಶುದ್ಧ ಇಂಧನ ಪರಿವರ್ತನೆಯನ್ನು ಮುನ್ನಡೆಸಲು ಜಾಗತಿಕ ನೀತಿ ನಿರೂಪಕರು, ಉದ್ಯಮ ನಾಯಕರು, ಹೂಡಿಕೆದಾರರು, ತಂತ್ರಜ್ಞಾನ ಪೂರೈಕೆದಾರರು, ಸಂಶೋಧಕರು, ಸ್ಟಾರ್ಟ್‌ಅಪ್‌ಗಳು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ತಂದಿತು. ಶೃಂಗಸಭೆಯು 75,000 ಕ್ಕೂ ಹೆಚ್ಚು ವೀಕ್ಷಕರು, 400 ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 113 ಗೋಷ್ಠಿಗಳಲ್ಲಿ 627 ಕ್ಕೂ ಹೆಚ್ಚು ಭಾಷಣಕಾರರೊಂದಿಗೆ ಬಲವಾದ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಪಾಲುದಾರ ದೇಶಗಳು, ಐಎಸ್‌ಎ ಸದಸ್ಯರು, ಅಂತಾರಾಷ್ಟ್ರೀಯ ಸಂಸ್ಥೆಗಳು ಮತ್ತು ಭಾರತದಲ್ಲಿರುವ ರಾಜತಾಂತ್ರಿಕ ನಿಯೋಗಗಳು ಸೇರಿದಂತೆ 135 ದೇಶಗಳ ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದರು. ಉನ್ನತ ಮಟ್ಟದ ಸಚಿವರ ಭಾಗವಹಿಸುವಿಕೆಯಲ್ಲಿ 32 ಅಂತಾರಾಷ್ಟ್ರೀಯ ಸಚಿವರು, 6 ಮುಖ್ಯಮಂತ್ರಿಗಳು ಮತ್ತು 10 ರಾಜ್ಯ ಇಂಧನ ಸಚಿವರು ಸೇರಿದ್ದು, ಇದು ರಾಷ್ಟ್ರೀಯ ಮತ್ತು ಉಪ-ರಾಷ್ಟ್ರೀಯ ಪಾಲುದಾರರಿಂದ ಬಲವಾದ ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಫಲಿಸುತ್ತದೆ.

ನೀತಿ ನಿರೂಪಕರು, ಹೂಡಿಕೆದಾರರು, ಉದ್ಯಮ, ಸಂಶೋಧನಾ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು ಮತ್ತು ಅಂತಾರಾಷ್ಟ್ರೀಯ ಅಭಿವೃದ್ಧಿ ಪಾಲುದಾರರನ್ನು ಒಂದೆಡೆ ತರುವ ಮೂಲಕ, ಶೃಂಗಸಭೆಯು ಭಾರತದ ಶುದ್ಧ ಇಂಧನ ಮಾರುಕಟ್ಟೆಯ ಮೇಲಿನ ವಿಶ್ವಾಸವನ್ನು ಬಲಪಡಿಸಿದೆ ಮತ್ತು ರಾಷ್ಟ್ರೀಯ ಹಾಗೂ ಜಾಗತಿಕ ಆಕಾಂಕ್ಷೆಗಳನ್ನು ಅನುಷ್ಠಾನಕ್ಕಾಗಿ ಭವಿಷ್ಯದ ಕಾರ್ಯಸೂಚಿಯಾಗಿ ಪರಿವರ್ತಿಸಲು ಸಹಾಯ ಮಾಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8410 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment