Wednesday, September 23, 2026
Google search engine
Homeದೇಶಉಪ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

ಉಪ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.

ರಾಧಾಕೃಷ್ಣನ್ ಪ್ರಧಾನಿ ಹಾಗೂ ಎನ್‌ಡಿಎ ನಾಯಕರೊಂದಿಗೆ ಆಗಮಿಸಿ, ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಅಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರಿಗೆ ನಾಲ್ಕು ಸೆಟ್ ಗಳ ನಾಮಪತ್ರಗಳನ್ನು ಸಲ್ಲಿಕೆ ಮಾಡಿದರು. ನಾಲ್ಕು ಸೆಟ್ ನಾಮಪತ್ರಗಳಲ್ಲಿ ಮೋದಿ, ಸಿಂಗ್, ಶಾ ಮತ್ತು ಜೆಡಿ(ಯು) ನಾಯಕ ರಾಜೀವ್ ರಂಜನ್ ಸಿಂಗ್ ಪ್ರಮುಖ ಪ್ರತಿಪಾದಕರಾಗಿದ್ದಾರೆ.

ರಿಟರ್ನಿಂಗ್ ಅಧಿಕಾರಿ ನಾಮಪತ್ರಗಳನ್ನು ಪರಿಶೀಲಿಸಿದರು. ನಂತರ ರಾಧಾಕೃಷ್ಣನ್ ನೋಂದಣಿಗೆ ಸಹಿ ಹಾಕಿದರು. ನಂತರ ರಿಟರ್ನಿಂಗ್ ಅಧಿಕಾರಿ ಪ್ರಧಾನಮಂತ್ರಿಗೆ ನಾಮಪತ್ರಗಳ ಸ್ವೀಕೃತಿ ಚೀಟಿಯನ್ನು ಹಸ್ತಾಂತರಿಸಿದರು.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಶಾ, ಹಿರಿಯ ಸಚಿವರಾದ ಪ್ರಲ್ಹಾದ್ ಜೋಶಿ, ಧರ್ಮೇಂದ್ರ ಪ್ರಧಾನ್ ಮತ್ತು ಟಿಡಿಪಿ ನಾಯಕ ಮತ್ತು ಕೇಂದ್ರ ಸಚಿವ ಕೆ. ರಾಮ್ ಮೋಹನ್ ನಾಯ್ಡು, ಶಿವಸೇನಾ ನಾಯಕ ಶ್ರೀಕಾಂತ್ ಶಿಂಧೆ, ಎಲ್‌ಜೆಪಿಎಸ್‌ಪಿ ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಇತರ ಎನ್‌ಡಿಎ ನಾಯಕರು ರಾಧಾಕೃಷ್ಣನ್ ಅವರನ್ನು ಸಂಸತ್ತಿನ ಚುನಾವಣಾಧಿಕಾರಿ ಕಚೇರಿಗೆ ಕರೆದೊಯ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments