ಲೋಕಸಭಾ ಅಧಿವೇಶನದ ಜಂಟಿ ಅಧಿವೇಶನದಲ್ಲಿ ನೀಟ್ ಪರೀಕ್ಷಾ ಅಕ್ರಮ ಪ್ರತಿಧ್ವನಿಸಿದ್ದು, ಈ ವಿಷಯದ ಕುರಿತು ಚರ್ಚೆಗೆ ಒಂದು ದಿನದ ಕಾಲವಕಾಶ ಕೋರಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪಟ್ಟು ಹಿಡಿದರು.
ಸೋಮವಾರ ಕಲಾಪ ಆರಂಭಗೊಳ್ಳುತ್ತಿದ್ದಂತೆ ನೀಟ್ ಪರೀಕ್ಷಾ ಅಕ್ರಮ ಚರ್ಚೆಗೆ ಕೋರಿ ಪ್ರತಿಪಕ್ಷಗಳು ಪಟ್ಟು ಹಿಡಿದವು. ಸ್ಪೀಕರ್ ಓಂಪ್ರಕಾಶ್ ಬಿರ್ಲಾ ಚರ್ಚೆಗೆ ಅವಕಾಶ ನೀಡಲು ನಿರಾಕರಿಸಿದ್ದರಿಂದ ಪ್ರತಿಪಕ್ಷಗಳು ಸಭೆಯನ್ನು ಬಹಿಷ್ಕರಿಸಿ ಹೊರನಡೆದವು.
ಮತ್ತೊಂದೆಡೆ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದು, ಪ್ರಧಾನಿಗಳು ಕೇವಲ ಘೋಷಣೆ ಕೂಗುವುದಕ್ಕಷ್ಟೇ ಸೀಮಿತವಾಗಿದ್ದಾರೆ. ದೇಶದ ಯುವಕರು ಸಂಕಷ್ಟ ಎದುರಿಸುತ್ತಿರುವಾಗ ಚರ್ಚೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.