ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ನೆಟ್ ಮತ್ತು ನೀಟ್ ಪ್ರವೇಶ ಪರೀಕ್ಷೆ ಸೋರಿಕೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು ನ್ಯಾಯಾಲಯಕ್ಕೆ 900 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ನೀಟ್ ಮತ್ತು ನೆಟ್ ಪ್ರವೇಶ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಗುರುವಾರ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಭ್ಯರ್ಥಿಗಳು ಒಂದು ವಿಷಯಕ್ಕಾಗಿ ತಲಾ 7 ಲಕ್ಷ ರೂ. ನೀಡುವುದಾಗಿ ಒಪ್ಪಿಕೊಂಡಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ನೀಟ್ ಮತ್ತು ನೆಟ್ ಪ್ರವೇಶ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ್ದರಿಂದ ಸುಮಾರು 46 ಲಕ್ಷ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರಿದೆ.
2015ರ ದಂತ ವೈದ್ಯ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಅಭಿಷೇಕ್ ಶುಕ್ಲ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿದೆ. ಪ್ರಕರಣದಲ್ಲಿ ಇದುವರೆಗೆ 15 ಮಂದಿಯನ್ನು ಬಂಧಿಸಲಾಗಿದ್ದು, ಇದರಲ್ಲಿ ಒಬ್ಬ ಪೊಲೀಸ್ ಕಾನ್ ಸ್ಟೇಬಲ್ ಕೂಡ ಸೇರಿದ್ದಾರೆ.