ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದಾಗಿದ್ದ ನೀಟ್ ಯುಜಿ ಪರೀಕ್ಷೆಯನ್ನು ಜೂನ್ 21ರಿಂದ ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊರುವುದಾಗಿ ಘೋಷಿಸಿದ ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್, ಜೂನ್ 21ರಿಂದ ಮರು ಪರೀಕ್ಷೆ ಮಾಡುವುದಾಗಿ ಘೋಷಿಸಿದರು.
ಜೂನ್ 14ರಿಂದ ಹಾಲ್ ಟಿಕೆಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದ ಅವರು, ಮುಂದಿನ ವರ್ಷದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಆನ್ ಲೈನ್ ಪರೀಕ್ಷೆ ನಡೆಸಲಾಗುವುದು ಎಂದು ಘೋಷಿಸಿದರು.



