Sunday, June 7, 2026
Google search engine
Homeರಾಜ್ಯಸಂಧಾನ ಸಕ್ಸಸ್: ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್?

ಸಂಧಾನ ಸಕ್ಸಸ್: ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್?

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ನೇತೃತ್ವದಲ್ಲಿ ನಡೆದ ರಾಜೀ ಸಂಧಾನ ಯಶಸ್ವಿಯಾಗಿದ್ದು, ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶನಿವಾರ ಸುಮಾರು ಒಂದು ಗಂಟೆಗಳ ಕಾಲ ಗೌಪ್ಯ ಮಾತುಕತೆ ನಡೆದಿದೆ. ಈ ವೇಳೆ ಸಚಿವ ಕೃಷ್ಣ ಬೈರೇಗೌಡ ಮುಂತಾದವರು ಉಪಸ್ಥಿತರಿದ್ದರು.

ಸಭೆಯ ನಂತರ ಮಾತನಾಡಿದ ರಣದೀಪ್ ಸುರ್ಜೆವಾಲಾ, ರಾಮಲಿಂಗಾರೆಡ್ಡಿ ಅವರ ಮನವೊಲಿಕೆ ಮಾಡಲಾಗಿದ್ದು, ರಾಜೀನಾಮೆ ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ಪಕ್ಷದ ಹಿರಿಯ ನಾಯಕರು ಹಾಗೂ ಅನುಭವಿಗಳೂ ಆದ ರಾಮಲಿಂಗಾರೆಡ್ಡಿ ಜೊತೆ ನಾನು, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್ ಸೇರಿದಂತೆ ಎಲ್ಲರೂ ಮಾತನಾಡಿದ್ದೇವೆ. ಅವರ ರಾಜೀನಾಮೆ ಅಸಮಾಧಾನ ಬಗೆಹರಿಸಲಾಗಿದೆ ಎಂದರು.

ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಕುರಿತು ಬಿಜೆಪಿ ಬಹಳ ಖುಷಿಯಾಗಿದೆ. ಆದರೆ ನಮ್ಮ ಪಕ್ಷ ಕುಟುಂಬ ಇದ್ದಂತೆ. ಎಲ್ಲಾ ಸಮಸ್ಯೆಗಳನ್ನು ಕುಳಿತು ಬಗೆಹರಿಸಿಕೊಳ್ಳುತ್ತೇವೆ ಎಂದು ಸುರ್ಜೆವಾಲಾ ಹೇಳಿದರು.

ಆದರೆ ರಾಮಲಿಂಗಾರೆಡ್ಡಿ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ರಾತ್ರಿಯೊಳಗೆ ರಾಜೀನಾಮೆ ವಾಪಸ್ ಪಡೆಯುತ್ತಾರೆ ಎಂದು ಹೇಳಲಾಗಿದೆ.

ಮಾತುಕತೆ ವೇಳೆ ರಾಮಲಿಂಗಾರೆಡ್ಡಿಗೆ ಜಲಸಂಪನ್ಮೂಲ ಖಾತೆ ಜೊತೆಗೆ ಹೆಚ್ಚುವರಿಯಾಗಿ ಮತ್ತೊಂದು ಖಾತೆ ನೀಡಲು ಹೈಕಮಾಂಡ್ ಒಪ್ಪಿದೆ ಎಂದು ಹೇಳಲಾಗಿದೆ.

ಇದಕ್ಕೂ ಮುನ್ನ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರಾಗಿದ್ದಾರೆ. ಅವರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments