Thursday, May 14, 2026
Google search engine
Homeದೇಶದಕ್ಷಿಣ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಕಡಿತ ಇಲ್ಲ: ಮೋದಿ

ದಕ್ಷಿಣ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಕಡಿತ ಇಲ್ಲ: ಮೋದಿ

ತಿರುವನಂತಪುರ: ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕಡಿಮೆ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಕೇರಳದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಎಲ್ಲ ರಾಜ್ಯಗಳಿಗೆ ಅನುಕೂಲವಾಗುವಂತೆ ಲೋಕಸಭಾ ಕ್ಷೇತ್ರಗಳನ್ನು ಹೆಚ್ಚಳ ಮಾಡಲಾಗುವುದು ಎಂದರು.

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಬಳಿಕ ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿತಗೊಳ್ಳಲಿವೆ ಎಂಬ ಆತಂಕದ ಹಿನ್ನಲೆ ಮೋದಿ ಅವರ ಈ ಹೇಳಿಕೆ ಬಂದಿದೆ.

ಜನಸಂಖ್ಯಾ ನಿಯಂತ್ರಣದಿಂದಾಗಿ ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಡಿತ ಮಾಡಲಾಗುತ್ತದೆ ಎಂಬ ತಪ್ಪು ಮಾಹಿತಿ ಹರಡಲಾಗುತ್ತಿದೆ. ಅದು ಸಂಪೂರ್ಣ ಸುಳ್ಳು. ಈ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ರಕ್ಷಣೆಗೆ ಸಂಸತ್ತಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೇರಳ, ಕರ್ನಾಟಕ, ಆಂಧ್ರ ಪ್ರದೇಶ, ಗೋವಾ, ತೆಲಂಗಾಣ ಮತ್ತು ತಮಿಳುನಾಡನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಣಾಮಕಾರಿಯಾಗಿ ಜನಸಂಖ್ಯೆಯನ್ನು ನಿಯಂತ್ರಿಸಿರುವ ರಾಜ್ಯಗಳು ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಬಾರದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments