ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಈ ರೀತಿಯ ಷಡ್ಯಂತ್ರಗಳಿಗೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿರುವುದಕ್ಕೆ ಅವರು ಪ್ರತಿಕ್ರಿಯಿಸಿದರು.
ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ನಡೆದಿದೆ. ಈ ಷಡ್ಯಂತ್ರ ಮಾಡುತ್ತಿರುವವರು ಯಾರು ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ. ನನಗೆ ದೇವರು ಮತ್ತು ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ ಎಂದು ಅವರು ಹೇಳಿದರು.