Monday, May 25, 2026
Google search engine
Homeಕಾನೂನುಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು; ಕೂಡಲೇ ಬಿಡುಗಡೆಗೆ ಸೂಚನೆ!

ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು; ಕೂಡಲೇ ಬಿಡುಗಡೆಗೆ ಸೂಚನೆ!

ಚಿನ್ನದಂಗಡಿ ಮಾಲೀಕರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಪತಿ ಕೆ. ಎನ್. ಹರೀಶ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಚಂದ್ರಾಲೇಔಟ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರ ಪೀಠ ಇಬ್ಬರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಪೊಲೀಸರು ನೀಡಿದ್ದ ನೋಟಿಸ್‌ಗೆ ಪೂರಕವಾಗಿ ಸ್ಪಂದಿಸಿ, ಸ್ವಯಿಚ್ಛೆಯಿಂದ ಠಾಣೆಗೆ ತೆರಳಿ ತನಿಖೆಗೆ ಸಹಕರಿಸಿದ್ದರು. ಆದರೆ, ಪೊಲೀಸರು ಿಚಾರಣೆ ಪೂರ್ಣಗೊಳಿಸುವ ಮುನ್ನವೇ ಯಾವುದೇ ಸಕಾರಣ ತಿಳಿಸದೇ ಏಕಾಏಕಿ ಇಬ್ಬರನ್ನು ಬಂಧಿಸಿದ್ದರು.

ತನಿಖೆಗೆ ಸಹಕರಿಸುತ್ತಿದ್ದರೂ ಕಾರಣ ನೀಡದೇ ಬಂಧಿಸಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕಾನೂನು ಬಾಹಿರವಾಗಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಅರ್ಜಿದಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪೊಲೀಸರಿಗೆ ಸೂಚಿಸಿದೆ.

ಆರೋಪಿಗಳು ಪೊಲೀಸರ ತನಿಖೆಗೆ ಸೂಕ್ತವಾಗಿ ಸಹಕರಿಸಬೇಕು ಎಂದು ಷರತ್ತು ವಿಧಿಸಿರುವ ಹೈಕೋರ್ಟ್, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಚಂದ್ರಾಲೇಔಟ್ ಠಾಣಾ ಪೊಲೀಸರು ಮತ್ತು ದೂರುದಾರೆ ವನಿತಾ ಐತಾಳ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments