Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಬಿಎಂಪಿ ಕಂದಾಯ ಅಧಿಕಾರಿ: ನೋಟಿಸ್ ಜಾರಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
bbmp officer basavaraj magi
bbmp officer basavaraj magi

ಬಿಬಿಪಿಎಂಯಲ್ಲಿ ಪ್ರತಿಯೊಂದು ಕಡತ ಮುಂದಿನ ಟೇಬಲ್ ಗೆ ಹೋಗಬೇಕು ಅಂದರೆ ಕೈ ಬಿಸಿ ಮಾಡಲೇಬೇಕು. ಇಲ್ಲದಿದ್ದರೆ ಅಲೆದು ಅಲೆದು ಚಪ್ಪಲಿ ಸವೆಯುತ್ತವೆ ಹೊರತು ಕೆಲಸ ಮಾತ್ರ ಆಗುವುದಿಲ್ಲ ಎಂಬ ದೂರುಗಳಿಗೆ ಸಾಕ್ಷಿ ಲಭಿಸಿದ್ದು, ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಬಿಎಂಪಿ ಕಂದಾಯ ಅಧಿಕಾರಿ ಸಿಕ್ಕಿಬಿದ್ದಿದ್ದಾನೆ.

ಮಹಾದೇವಪುರ ಬಿಬಿಎಂಪಿ ಕಚೇರಿ ಕಂದಾಯ ಅಧಿಕಾರಿ ಬಸವರಾಜ್ ಮಗ್ಗಿ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಇತ್ತೀಚೆಗಷ್ಟೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರೂ ಬುದ್ದಿ ಕಲಿಯದ ಬಸವರಾಜ ಮಗ್ಗಿ ತಮ್ಮ ಲಂಚ ಪಡೆಯುವ ಚಾಳಿಯನ್ನು ಮುಂದುವರಿಸಿದ್ದಾರೆ. ಇದೀಗ ಮಾಧ್ಯಮಗಳ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಕಂದಾಯ ಅಧಿಕಾರಿ ಬಸವರಾಜ ಮಗ್ಗಿ ಮನೆಯಲ್ಲಿ ಅಪಾರ ಪ್ರಮಾಣ ಆಸ್ತಿ ಪತ್ತೆಯಾಗಿತ್ತು. ಅಲ್ಲದೇ ಕ್ಯಾಸಿನೋ ಕಾಯಿಲ್, ಹುಲಿ ಉಗುರು ಸಹ ಪತ್ತೆಯಾಗಿದ್ದು, ಭ್ರಷ್ಟಾಚಾರದ ಪರಮಾವಧಿ ಕಂಡು ಜನರು ಬೆಚ್ಚಿಬಿದ್ದಿದ್ದರು. ಲೋಕಾಯುಕ್ತ ದಾಳಿ ನಂತರವೂ ಬುದ್ದಿ ಕಲಿಯದ ಬಸವರಾಜ ಮಗ್ಗಿ ಮತ್ತೆ ಲಂಚದ ಬೆನ್ನುಬಿದ್ದಿದ್ದಾರೆ ಅಂದರೆ ಈತ ದೌಲತ್ತು ಎಷ್ಟಿರಬೇಕು ಎಂದು ಊಹಿಸಬಹುದು.

ಬಸವರಾಜ ಮಗ್ಗಿ ಕಡತ ವಿಲೇವಾರಿ ಮಾಡಲು ಲಂಚ ಪಡೆಯುವಾಗ ಮಾಧ್ಯಮದ ಕ್ಯಾಮರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ. ಈ ವೀಡಿಯೋ ಬಿಬಿಎಂಪಿ ವಲಯ ಆಯುಕ್ತ ರಮೇಶ್ ಗೆ ಸಾಕ್ಷಿ ಸಮೇತ ದೂರು ಸಲ್ಲಿಸಲಾಗಿದ್ದು, ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment