ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ಸಚಿವನ ಆಪ್ತ ಕಾರ್ಯದರ್ಶಿ ಸೇರಿದಂತೆ ವಿವಿಧೆಡೆ ದಾಳಿ ಮಾಡಿದ್ದು, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಪತ್ತೆ ಹಚ್ಚಿದ್ದಾರೆ.
ರಾಂಚಿಯಲ್ಲಿರುವ ಸಚಿವ ಅಲ್ಮಗಿರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು 20ರಿಂದ 30 ಕೋಟಿ ರೂ. ಮೌಲ್ಯದ ನೋಟಿನ ಕಂತುಗಳ ರಾಶಿ ಕಂಡು ಬೆಚ್ಚಿಬಿದ್ದಿದ್ದಾರೆ.
ಹಣದ ಮೌಲ್ಯ ನಿಖರವಾಗಿ ಹೇಳಲು ಸಾಧ್ಯವಾಗದ ಕಾರಣ ಇಡಿ ಅಧಿಕಾರಿಗಳು ಹಣ ಎಣಿಕೆಯ ಯಂತ್ರವನ್ನು ತರಿಸಿದ್ದಾರೆ. ಅಲ್ಲದೇ ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ, ದಾಳಿಯನ್ನು ಮುಂದುವರಿಸಿದ್ದು, ಹಲವು ಕಡೆ ನಡೆದ ಏಕಕಾಲದ ದಾಳಿಯಲ್ಲಿ ಇನ್ನಷ್ಟು ಮಾಹಿತಿ ಸಂಗ್ರಹಿಸುವ ಸಾಧ್ಯತೆ ಇದೆ.