Wednesday, July 1, 2026
Google search engine
Homeಕ್ರೀಡೆಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ

ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಡಬಲ್ ಪದಕ ವಿಜೇತ ಮನು ಭಾಕರ್ ಅಜ್ಜಿ ಮತ್ತು ಚಿಕ್ಕಪ್ಪ ಹರಿಯಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಹರಿಯಾಣದ ಮಗೇಂದ್ರಗಢ ಬೈಪಾಸ್‌ ರಸ್ತೆಯಲ್ಲಿ ಭಾನುವಾರ ಮುಂಜಾನೆ ಸ್ಕೂಟರ್‌ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮನುಭಾಕರ್ ಅಜ್ಜಿ ಮತ್ತು ಚಿಕ್ಕಪ್ಪ ಅಸುನೀಗಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ರಾಷ್ಟ್ರಪತಿಗಳಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಮನು ಭಾಕರ್ ಗೆ ಇದು ಆಘಾತಕಾರಿ ಸುದ್ದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಕಾರಿನ ಚಾಲಕ ಪರಾರಿಯಾಗಿದ್ದಾನೆ.

ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments