Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

15 ಸಾವಿರ ಶಿಕ್ಷಕರ ನೇಮಕಕ್ಕೆ ಆ.18ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 31 ವೀಕ್ಷಣೆಗಳು
vidhana souda
vidhana souda

ಬೆಂಗಳೂರು:ರಾಜ್ಯಾದ್ಯಂತ 15 ಸಾವಿರ ಮಂದಿ ಸರ್ಕಾರಿ ಶಿಕ್ಷಕರ ನೇಮಕಾತಿ ಮಾಡಲು ಇದೇ ಆಗಸ್ಟ್ 18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ನೇಮಕಾತಿಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿದೆ. ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ನಡೆಸಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಶಿಕ್ಷಕರ ನೇಮಕಾತಿ ಮಹತ್ವದ ಹೆಜ್ಜೆಯಾಗಿದೆ.

ತೊಡಕುಗಳು ನಿವಾರಣೆ:

ಒಳ ಮೀಸಲಾತಿ ವಿಚಾರ ಹಾಗೂ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆಗಳ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು. ಇದೀಗ ಪ್ರಮುಖ ಕಾನೂನು ಹಾಗೂ ಆಡಳಿತಾತ್ಮಕ ತೊಡಕುಗಳು ನಿವಾರಣೆಯಾಗಿದ್ದು, ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಕಲ್ಯಾಣ ಕರ್ನಾಟಕಕ್ಕೆ 6,967 ಹುದ್ದೆಗಳು:

ಒಟ್ಟು 15,000 ಹುದ್ದೆಗಳನ್ನು ಪ್ರಾದೇಶಿಕ ಆಧಾರದ ಮೇಲೆ ಎರಡು ವೃಂದಗಳಾಗಿ ವಿಂಗಡಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 6,967 ಹುದ್ದೆಗಳನ್ನು ಮೀಸಲಿಡಲಾಗಿದೆ.

ಈ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.

ಉಳಿಕೆ ಮೂಲ ವೃಂದಕ್ಕೆ 8,033 ಹುದ್ದೆಗಳು:

ಉಳಿಕೆ ಮೂಲ ವೃಂದ ಕ್ಕೆ ಒಟ್ಟು 8,033 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲ ವೃಂದ ಎರಡನ್ನೂ ಸೇರಿಸಿ ರಾಜ್ಯಾದ್ಯಂತ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.

ಯಾವೆಲ್ಲ ಹುದ್ದೆಗಳಿಗೆ ನೇಮಕ

ವಿವಿಧ ಹಂತಗಳ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಈ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಪ್ರಮುಖವಾಗಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು, ಗಣಕ ವಿಜ್ಞಾನ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳು ನೇಮಕಾತಿಯಲ್ಲಿ ಒಳಗೊಂಡಿವೆ.

ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆ

ಅಭ್ಯರ್ಥಿಗಳಿಗೆ ತಮ್ಮ ಜಿಲ್ಲೆಯಲ್ಲಿ ಲಭ್ಯವಿರುವ ಹುದ್ದೆಗಳ ಕುರಿತು ಸ್ಪಷ್ಟ ಮಾಹಿತಿ ನೀಡುವ ಉದ್ದೇಶದಿಂದ ಶೈಕ್ಷಣಿಕ ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗುತ್ತದೆ. ಇದರಲ್ಲಿ ಜಿಲ್ಲಾವಾರು ಹುದ್ದೆಗಳ ಸಂಖ್ಯೆ, ಹುದ್ದೆಗಳ ವಿವರ, ಮೀಸಲಾತಿ ಹಂಚಿಕೆ ಹಾಗೂ ನೇಮಕಾತಿಗೆ ಸಂಬಂಧಿಸಿದ ಬದಲಾವಣೆಗಳ ಕುರಿತು ಮಾಹಿತಿ ನೀಡಲಾಗುತ್ತದೆ.

ಆಗಸ್ಟ್ 18ರಿಂದ ಆನ್‌ಲೈನ್ ಅರ್ಜಿ:

ಶಿಕ್ಷಕರ ನೇಮಕಾತಿಗೆ ಆಗಸ್ಟ್ 18 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಿಂದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆ ಹಾಗೂ ಹುದ್ದೆಗೆ ಅನ್ವಯಿಸುವ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬೇಕು.

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ:

ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಗಳನ್ನು ಸರ್ಕಾರದ ಇ-ರಾಜಪತ್ರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಜಿಲ್ಲಾವಾರು ಹುದ್ದೆಗಳ ವಿವರ, ಮೀಸಲಾತಿ ಹಾಗೂ ನೇಮಕಾತಿ ನಿಯಮಗಳ ಕುರಿತು www.erajyapatra.karnataka.gov.in ಮೂಲಕ ಮಾಹಿತಿ ಪಡೆಯಬಹುದು. ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ schooleducation.kar.nic.in ಗೆ ಭೇಟಿ ನೀಡಬಹುದು. ನೇಮಕಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಅಧಿಕೃತ ಮೂಲಗಳಿಂದಲೇ ಪರಿಶೀಲಿಸುವುದು ಸೂಕ್ತ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment