ಕೊಡಗು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್ ಎಸ್ ಜಲಾಶಯದ ಒಳಹರಿವು ಹೆಚ್ಚಿದ್ದು, 100 ಅಡಿ ಭರ್ತಿಗೆ ಕ್ಷಣಗಣನೆ ಶುರುವಾಗಿದೆ.
ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಳೆದ ಒಂದು ವಾರದಲ್ಲಿ ಕೆಆರ್ ಎಸ್ ನಲ್ಲಿ 7 ಟಿಎಂಸಿ ಭರ್ತಿಯಾಗಿದೆ. ಇದರಿಂದ 100ರ ಗಡಿ ದಾಟಲು ಅರ್ಧ ಅಡಿ ಮಾತ್ರ ಬಾಕಿ ಇದೆ.
ಕೆಆಎಸ್ ಜಲಾಶಯದ ಗರಿಷ್ಠ ಮಟ್ಟ 124 ಅಡಿಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 80 ಅಡಿಯಷ್ಟು ಕೂಡ ಭರ್ತಿಯಾಗಿರಲಿಲ್ಲ. ಈ ಬಾರಿ ಉತ್ತಮ ಮಳೆಯಾಗುತ್ತಿರುವುದರಿಂದ ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ವಿವಾದ ಸೃಷ್ಟಿಯಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತವಾಗಿದೆ.
ಕೆಆರ್ ಎಸ್ ಜಲಾಶಯಕ್ಕೆ ಪ್ರತಿನಿತ್ಯ 13 ಸಾವಿರ ಕ್ಯೂಸೆಕ್ಸ್ ನೀರು ಒಳಹರಿವು ಬರುತ್ತಿದ್ದು, ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಇನ್ನಷ್ಟು ದಿನ ಇದೇ ಮಟ್ಟದಲ್ಲಿ ಒಳಹರಿವು ಬರುವ ನಿರೀಕ್ಷೆ ಇದ್ದು, ಈ ಬಾರಿ ಕೆಆರ್ ಎಸ್ ಡ್ಯಾಂ ಭರ್ತಿಯಾಗುವ ಭರವಸೆ ಮೂಡಿಸಿದೆ.