ಕದನ ವಿರಾಮ ಘೋಷಣೆ ಆಗಿದ್ದರೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರಿಯಲಿದೆ. ಈ ಬಗ್ಗೆ ವಂದತಿಗಳಿಗೆ ಕಿವಿಕೊಡದೇ ಅಧಿಕೃತ ಮಾಹಿತಿಗಾಗಿ ನಿರೀಕ್ಷಿಸಿ ಎಂದು ಭಾರತೀಯ ವಾಯುಪಡೆ ಘೋಷಿಸಿದೆ.
ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಾಯುಪಡೆ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಿಂತಿಲ್ಲ. ಮುಂದುವರಿಯಲಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾಡುವವರೆಗೂ ಕಾಯಬೇಕು. ಅಲ್ಲಿಯವರೆಗೂ ವದಂತಿಗಳಿಗೆ ಕಿವಿಕೊಡಬೇಡಿ ಎಂದು ಅವರು ಹೇಳಿದ್ದಾರೆ.
ದೇಶದ ಹಿತಾಸಕ್ತಿ ಹಿನ್ನೆಲೆಯಲ್ಲಿ ದಾಳಿಯ ಸ್ವರೂಪ ಬದಲಾಗಲಿದೆ. ಸೂಕ್ತ ಸಮಯದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗುವುದು ಎಂದು ವಾಯುಪಡೆ ಹೇಳಿದೆ



