Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ರಾಜ್ಯ

ಆಪರೇಷನ್​ 5 ಟೈಗರ್ಸ್: ಚಾಮರಾಜನಗರದಲ್ಲಿ ಗಂಡು ಹುಲಿ ಸೆರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು

ಚಾಮರಾಜನಗರದಲ್ಲಿ ಹೆಚ್ಚಾಗಿರುವ ಹುಲಿಗಳ ಹಾವಳಿ ನಿಯಂತ್ರಣಕ್ಕೆ ನಡೆಯುತ್ತಿರುವ ಆಪರೇಷನ್ 5 ಟೈಗರ್ಸ್ ಕಾರ್ಯಾಚರಣೆಯಲ್ಲಿ ಮಂಗಳವಾರ ರಾತ್ರಿ ಒಂದು ಗಂಡು ಹುಲಿ ಸೆರೆ ಸಿಕ್ಕಿದೆ.

ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ  ತಾಯಿ ಹುಲಿಯೊಂದಿಗೆ ನಾಲ್ಕು ಮರಿ ಹುಲಿಗಳು ಬೀಡುಬಿಟ್ಟಿರುವ ಚಾಮರಾಜನಗರ ತಾಲೂಕಿನ ನಂಜೇದೇವನಪುರ ಸಮೀಪ ಗಂಡು ಹುಲಿ ಕಾಣಿಸಿಕೊಂಡ ಬೆನ್ನಲ್ಲೇ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದ.ೆ

ನಂಜೇದೇವನಪುರ, ವೀರನಪುರ, ಆನೆ ಮಡುವಿನ ಕೆರೆ ಬಳಿ 5 ಹುಲಿಗಳಿವೆ ಎಂದು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ನಿನ್ನೆ ರಾತ್ರಿ ಗಂಡು ಹುಲಿ ಕಾಣಿಸಿಕೊಂಡ ಕೂಡಲೇ ಸಾಕಾನೆಗಳ ಸಹಾಯದಿಂದ ಅರಿವಳಿಕೆ ಕೊಟ್ಟು ಸೆರೆ ಹಿಡಿಯಲಾಗಿದೆ.

ಕೂಂಬಿಂಗ್​​ ಎಕ್ಸ್​ಪರ್ಟ್​​ ಸುಗ್ರೀವ ಕರಾರುವಕ್ಕಾಗಿ ಹುಲಿಯ ವಾಸನೆ ಪತ್ತೆ ಹಚ್ಚಿ ತನ್ನ ಮಾವುತ ಶಂಕರ್​ಗೆ ಸೂಚನೆ ನೀಡಿತ್ತು. ತಕ್ಷಣ ಸುಗ್ರೀವ ಆನೆಯ ಸಹಾಯದಿಂದ ಆನೆಮಡುವಿನ ಕೆರೆ ಪಕ್ಕ ನೀರು ಕುಡಿಯಲು ಬಂದ ಹುಲಿಗೆ ಪಶು ವೈದ್ಯರು ಅರಿವಳಿಕೆ ಕೊಟ್ಟರು. ಬಳಿಕ ಸೆರೆ ಹಿಡಿಯಲಾಯಿತು.

ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಒಂದೆಡೆ ಇದ್ದರೆ, ಈ ಗಂಡು ಹುಲಿ ಪ್ರತ್ಯೇಕವಾಗಿತ್ತು. ಇದರಿಂದ ನಂಜೇದೇವನಪುರದಲ್ಲಿ ಇದ್ದದ್ದು 5 ಅಲ್ಲ 6 ಹುಲಿ ಎಂಬಂತಾಗಿದೆ. ಕಲ್ಪುರದಲ್ಲಿ ಕಳೆದ ತಿಂಗಳು ಕ್ಯಾಮರಾ ಟ್ರ್ಯಾಪ್​ನಲ್ಲಿ ಕ್ಯಾಪ್ಚರ್​ ಆಗಿದ್ದ ದೊಡ್ಡ ಗಾತ್ರದ​ ಹುಲಿ ಇದಾಗಿದೆ ಎನ್ನಲಾಗಿದೆ.

ಬಿಆರ್​ಟಿ ಹುಲಿ ಸಂರಕ್ಷಿತ ಪ್ರದೇಶದ 100ಕ್ಕೂ ಅಧಿಕ ಸಿಬ್ಬಂದಿ ಒಂದು ಹುಲಿಯನ್ನು ಸೆರೆ ಹಿಡಿದಿದ್ದು ಆಪರೇಷನ್​ 5 ಟೈಗರ್ಸ್ ​(ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು) ಕಾರ್ಯಾಚರಣೆ ಮುಂದುವರೆದಿದೆ.

ಡ್ರೋನ್ ಕ್ಯಾಮೆರಾ ಮೂಲಕ ಹುಲಿಗಳ ಪತ್ತೆ: ಹುಲಿ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಅರಣ್ಯ ಇಲಾಖೆ ಚಾಮರಾಜನಗರದ ಜಿಲ್ಲೆಯಲ್ಲಿ ಕೂಂಬಿಂಗ್​ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಇದೇ ಕಾರ್ಯಾಚರಣೆಯಲ್ಲಿ ಕಳೆದ ವಾರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸೆರೆ ಹಿಡಿದಿದ್ದರು. ಈ ಹುಲಿಗೆ ಸುಮಾರು 7-8 ವರ್ಷ ವಯಸ್ಸಾಗಿತ್ತು.

ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿನಲ್ಲಿ ಒಂದು ಹುಲಿ ಡಿ.25ರಂದು ಸೆರೆಯಾಗಿತ್ತು. ಈ ಹುಲಿ ಅಧಿಕ ಜಾನುವಾರುಗಳನ್ನು ಬೇಟೆಯಾಡಿದ್ದರಿಂದ ರೋಸಿ ಹೋಗಿದ್ದ ಗ್ರಾಮಸ್ಥರು ಸೆರೆಗೆ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಬೋನ್ ಇಟ್ಟು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಗಿತ್ತು. ತುಮಕೂರು ಮಾದರಿಯಲ್ಲಿ ಬೋನಿನಲ್ಲಿದ್ದ ಕರುವನ್ನು ಭಕ್ಷಿಸಲು ಹೋದ ವ್ಯಾಘ್ರ ಬಂಧಿಯಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment