Wednesday, May 13, 2026
Google search engine
Homeದೇಶ364 ಭರವಸೆ ಈಡೇರಿಸಿದ್ದೇವೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

364 ಭರವಸೆ ಈಡೇರಿಸಿದ್ದೇವೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆಗಳ ಪೈಕಿ 364 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.

ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೃಷ್ಣಗಿರಿಯಲ್ಲಿ ಸೋಮವಾರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2021ರ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ್ದ ಭರವಸೆಗಳಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಿದ್ದೇವೆ ಎಂದರು.

ಡಿಎಂಕೆ ಚುನಾವಣಾ ಪ್ರಣಾಳಿಕೆಯಲ್ಲಿ 505 ಭರವಸೆಗಳನ್ನು ನೀಡಲಾಗಿದ್ದು, ಇದರಲ್ಲಿ 364 ಭರವಸೆಗಳನ್ನು ಈಡೇರಿಸಲಾಗಿದ್ದು, 40 ಭರವಸೆಗಳು ಜಾರಿ ಹಂತದಲ್ಲಿವೆ. ಈ ಮೂಲಕ ಚುನಾವಣೆಗೂ ಮುನ್ನ 404 ಭರವಸೆಗಳನ್ನು ಈಡೇರಿಸಲಿದ್ದೇವೆ ಎಂದು ಅವರು ವಿವರಿಸಿದರು.

37 ಭರವಸೆಗಳು ಪರಿಶೀಲನಾ ಹಂತದಲ್ಲಿದ್ದರೆ 67 ಭರವಸೆಗಳು ನಿಧಿಯ ಕೊರತೆಯಿಂದ ಜಾರಿ ಮಾಡಲು ಸಾಧ್ಯವಾಗಿಲ್ಲ. ಜನರಿಗೆ ಅತ್ಯಗತ್ಯವಾದ ಶಾಲಾ ಮಕ್ಕಳ ಬಿಸಿಯೂಟ, ಮನೆ ಬಾಗಿಲಿಗೆ ಆರೋಗ್ಯ ಸೇವೆ, ಕೌಶಲ್ಯಾಭಿವೃದ್ಧಿ ಯೋಜನೆಗಳು ಅಪಘಾತ ತಡೆಗೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇಂತಹ ಚುನಾವಣಾ ಪ್ರಣಾಳಿಕೆಯಲ್ಲಿ ಇಲ್ಲದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.

ಎಂ.ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ತಮಿಳುನಾಡಿನಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಕೇವಲ ಜಾತಿ ಹಾಗೂ ಧರ್ಮ ಆಧಾರಿತ ರಾಜಕೀಯ ಮಾಡುತ್ತಿವೆ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ಸ್ಟಾಲಿನ್ ತಿರುಗೇಟು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments