Monday, June 29, 2026
Google search engine
Homeದೇಶಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತದಿಂದ 600ಕ್ಕೂ ಹೆಚ್ಚು ಮಂದಿ ಅಸ್ವಸ್ಥ, 40 ಮಂದಿ ಸ್ಥಿತಿ ಗಂಭೀರ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತದಿಂದ 600ಕ್ಕೂ ಹೆಚ್ಚು ಮಂದಿ ಅಸ್ವಸ್ಥ, 40 ಮಂದಿ ಸ್ಥಿತಿ ಗಂಭೀರ

ಭುವನೇಶ್ವರ್: ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಶುಕ್ರವಾರ ಆರಂಭಗೊಂಡಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ಭಕ್ತದಿಗಳ ನಡುವೆ ನೂಕುನಗ್ಗಲು ಸಂಭವಿಸಿದ್ದರಿಂದ 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, 40ಕ್ಕೂ ಅಧಿಕ ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಒಡಿಶಾದ ಪುರಿಯಲ್ಲಿ ಆರಂಭಗೊಂಡ ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆ ಶುಕ್ರವಾರ ರಾತ್ರಿ ಆರಂಭಗೊಂಡಿತು;

ರಥಯಾತ್ರೆ ವೇಳೆ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಭಕ್ತರನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂತ್ರಸ್ತರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೂ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ.

ಬಲಭದ್ರನ ತಾಳಧ್ವಜ ರಥ ಎಳೆಯುವ ವೇಳೆ ವಿಳಂಬವಾದ ಹಿನ್ನೆಲೆಯಲ್ಲಿ ರಥಯಾತ್ರೆ ಮಾರ್ಗದ ತಿರುವಿನಲ್ಲಿ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ರಥ ನಿಂತಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗಿದೆ.

ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ರಕ್ಷಣಾ ತಂಡವು ಕೂಡಲೇ ನೆರವಿಗೆ ಧಾವಿಸಿ ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಆರೋಗ್ಯ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ. ನೀರು ಮತ್ತು ಗ್ಲೂಕೋಸ್‌ಗೆ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಭಕ್ತರ ಆರೋಗ್ಯ ವಿಚಾರಿಸುತ್ತೇನೆ ಎಂದು ಒಡಿಶಾ ಸಚಿವ ಮುಖೇಶ್ ಮಹಾಲಿಂಗ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments