Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

2800 ಬೀದಿ ನಾಯಿ ಕೊಂದು ಹೂತಿದ್ದೇನೆ: ವಿಧಾನಪರಿಷತ್ ನಲ್ಲಿ ಭೋಜೇಗೌಡ ವಿವಾದಾತ್ಮಕ ಹೇಳಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
SL Bhojegowda

ನಾನು ಚಿಕ್ಕಮಗಳೂರು ನಗರಸಭೆ ಅಧ್ಯಕ್ಷನಾಗಿದ್ದ ವೇಳೆಯಲ್ಲಿ 2,800 ನಾಯಿಗಳಿಗೆ ಮಾಂಸ ಹಾಕಿಸಿ ತೆಂಗಿನ ಮರ ಕೆಳಗೆ ಹೂತು ಹಾಕಿಸಿದ್ದೇನೆ ಎಂದು ಜೆಡಿಎಸ್ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಪರಿಷತ್‌ನಲ್ಲಿ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ವಿಧಾನಪರಿಷತ್ ನಲ್ಲಿ ಬುಧವಾರ ಬೀದಿನಾಯಿಗಳಿಗೆ ಕಡಿವಾಣ ಹಾಕುವ ಕುರಿತು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಕುರಿತು ಚರ್ಚೆ ವೇಳೆ ಪಾಲ್ಗೊಂಡ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಸುಪ್ರೀಂ ಕೋರ್ಟ್ ದೆಹಲಿ-ರಾಷ್ಟ್ರೀಯ ರಾಜಧಾನಿ ಪ್ರದೇಶದಿಂದ (NCR) ಎಲ್ಲಾ ಬೀದಿ ನಾಯಿಗಳನ್ನು ತೆಗೆದುಹಾಕಿ, ಅವುಗಳನ್ನು ಆಶ್ರಯ ತಾಣಗಳಿಗೆ ಕಳುಹಿಸುವಂತೆ ಆದೇಶಿಸಿದೆ. ಈ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ವಿಧಾನ ಪರಿಷತ್‌ ಸದಸ್ಯರು, ಬೀದಿ ನಾಯಿಗಳನ್ನು ವಿಧಾನಸೌಧದ ಆವರಣದಿಂದ ತೆರವುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯರು (MLC) ಬೀದಿ ನಾಯಿಗಳ ಸಮಸ್ಯೆಯನ್ನು ಸರ್ಕಾರ ಸರಿಯಾಗಿ ನಿಭಾಯಿಸುತ್ತಿಲ್ಲ. ಬೀದಿ ನಾಯಿಗಳು ಸಾರ್ವಜನಿಕರಿಗೆ ಅಪಾಯಕಾರಿಯಾಗಿವೆ. ಚಿಕ್ಕಮಗಳೂರಿನಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಚಿಕ್ಕಮಗಳೂರಿನಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಮಕ್ಕಳು ಮತ್ತು ವೃದ್ಧರಿಗೆ ತೊಂದರೆಯಾಗುತ್ತಿದೆ. ಸರ್ಕಾರವು ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಬೀದಿ ನಾಯಿಗಳ ದಾಳಿಯಿಂದ ರೇಬಿಸ್ ರೋಗ ಬರುತ್ತದೆ. ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಚ್ಚುವುದು ತಪ್ಪಿಸಲು ಸಾಧ್ಯವಿಲ್ಲ. ನಾನು 2,800 ನಾಯಿಗಳನ್ನು ಸಾಯಿಸಿರುವುದಕ್ಕೆ ಸಾಕ್ಷಿಯಾಗಿದ್ದೇನೆ ಎಂದು ಹೇಳಿದರು.

ಮಕ್ಕಳು, ವೃದ್ಧರು ಯಾರನ್ನೂ ಬಿಡದೆ ನಾಯಿ ದಾಳಿ ಮಾಡುತ್ತಿವೆ. ನಮ್ಮ ನಿಮ್ಮ ಮಕ್ಕಳು, ಹೈಕೋರ್ಟ್ ನ್ಯಾಯಮೂರ್ತಿ ಮಕ್ಕಳು ಕಾರಿನಲ್ಲಿ ಹೋಗುವುದರಿಂದ ಸಮಸ್ಯೆ ಎದುರಾಗುವುದಿಲ್ಲ. ಸುಪ್ರೀಂಕೋರ್ಟ್‌ಗೆ ರಾಜ್ಯದ ಪರಿಸ್ಥಿತಿ ಕುರಿತು ಏಕೆ ನೀವು ತಿಳಿಸುವುದಿಲ್ಲ? ಒಂದು ಅರ್ಜಿ ಹಾಕಿ ತಿಳಿಸಿ. ನಾನು ಚಿಕ್ಕಮಗಳೂರು ನಗರಸಭೆ ಅಧ್ಯಕ್ಷನಾಗಿದ್ದ ವೇಳೆಯಲ್ಲಿ 2,800 ನಾಯಿಗಳಿಗೆ ಮಾಂಸ ಹಾಕಿಸಿ ತೆಂಗಿನ ಮರ ಕೆಳಗೆ ಹೂತು ಹಾಕಿಸಿದ್ದೇನೆ ಎಂದು ಅವರು ನುಡಿದರು.

“ನಾಯಿಗಳನ್ನು ಹೊರಹಾಕಿ ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ,’ ಎಂದು ಎನ್.ರವಿಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಭೈರತಿ ಸುರೇಶ್, ‘ಅದು ದಿಲ್ಲಿಗೆ ಮಾತ್ರ ಎಂದು ಭೈರತಿ ಸುರೇಶ್‌ ಉತ್ತರಿಸಿದರು.

ನಾಯಿ ಸಂತತಿ ತಡೆಗೆ ದಾರಿಗಳನ್ನು ಹುಡುಕುತ್ತೇವೆ. ಹೆಚ್ಚಿಗೆ ಮಾತನಾಡಿದರೆ ಪ್ರಾಣಿದಯಾ ಸಂಘದವರು ತಕರಾರು ಮಾಡುತ್ತಾರೆ ಎಂದು ಸಚಿವ ರಹೀಂ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಭೋಜೇಗೌಡ, ಎಲ್ಲ ನಾಯಿಗಳನ್ನು ಸಂಘದವರ ಮನೆಗಳಿಗೆ ಬಿಟ್ಟುಬಿಡಿ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment