Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 64 ವೀಕ್ಷಣೆಗಳು
india u-19 team

ಸೋತೆ ಬಿಟ್ಟೆವು ಎಂದು ಭಾವಿಸಿದ್ದ ಪಂದ್ಯವನ್ನು ಕೊನೆಯ ಎಸೆತದವರೆಗೂ ತೆಗೆದುಕೊಂಡು ಹೋದ ಭಾರತ ಕಿರಿಯರ ತಂಡ ಪಾಕಿಸ್ತಾನ ವಿರುದ್ಧ ರೋಚಕ 1 ವಿಕೆಟ್ ಜಯಭೇರಿ ಬಾರಿಸಿ 19 ವರ್ಷದೊಳಗಿನವರ ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಎಐ ಅಮರತ್ ಮೈದಾನದಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಉಸ್ಮಾನ್ ಖಾನ್ ಅವರ ಶತಕದ ನೆರವಿನಿಂದ 50 ಓವರ್ ಗಳಲ್ಲಿ 9 ವಿಕೆಟ್ ಗೆ 337 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಭಾರತ ತಂಡ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಈ ಮೂಲಕ ಲೀಗ್ ಹಂತದಲ್ಲಿ ಪಾಕಿಸ್ತಾನ ವಿರುದ್ಧ ಅನುಭವಿಸಿದ ಸೋಲಿಗೆ ಭರ್ಜರಿಯಾಗಿ ಸೇಡು ತೀರಿಸಿಕೊಂಡಿತು.

ಒಂದು ಹಂತದಲ್ಲಿ ಭಾರತ ತಂಡ 47.2 ಓವರ್ ಗಳಲ್ಲಿ 309 ರನ್ ಗೆ 9 ವಿಕೆಟ್ ಕಳೆದುಕೊಂಡು ಸೋಲಿನ ದವಡೆಗೆ ಸಿಲುಕಿತ್ತು. ಆದರೆ ಮೋಹಿತ್ ಉಲ್ಮಾ ಏಕಾಂಗಿಯಾಗಿ ಸಿಡಿಲಬ್ಬದ ಬ್ಯಾಟಿಂಗ್ ಪ್ರದರ್ಶಿಸಿ ರೋಚಕ ಗೆಲುವು ತಂದುಕೊಟ್ಟರು.

ಅದರಲ್ಲೂ ಅಂತಿಮ ಎಸೆತದಲ್ಲಿ ಭಾರತ 3 ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿತ್ತು. ಆದರೆ ಮೋಹಿತ್ ಬೌಂಡರಿ ಬಾರಿಸಿ ಗೆಲುವಿನ ರೂವಾರಿ ಆದರು. ಅಂತಿಮವಾಗಿ ಮೋಹಿತ್ ಉಲ್ಮಾ 26 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 49 ರನ್ ಬಾರಿಸಿ ಅಜೇಯರಾಗಿ ಉಳಿದರು.

ಇದಕ್ಕೂ ಮುನ್ನ ನಾಯಕ ಲಕ್ಷ್ಯ ರೈಚಂದಾನಿ ಮತ್ತು ಆರ್ಯವೀರ್ ಸೆಹ್ವಾಗ್ ಮೊದಲ ವಿಕೆಟ್ ಗೆ 146 ರನ್ ಜೊತೆಯಾಟದಿಂದ ಭರ್ಜರಿ ಆರಂಭ ನೀಡಿದರು. ಲಕ್ಷ್ಯ 80 ರನ್ ಬಾರಿಸಿ ಔಟಾದರೆ, ಆರ್ಯವೀರ್ 58 ರನ್ ಗಳಿಸಿದರು.

ಪಾಕಿಸ್ತಾನ ತಂಡಕ್ಕೆ ಆರಂಭಿಕ ಉಸ್ಮಾನ್ ಖಾನ್ ಶತಕದ ಮೂಲಕ ಬಲ ನೀಡಿದರು. ಉಸ್ಮಾನ್ ಖಾನ್ 111 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 107 ರನ್ ಸಿಡಿಸಿದರೆ, ಅಬ್ದುಲ್ ಖಾದಿರ್ 80 ಹಾಗೂ ನಾಯಕ ಫಾರ್ಹನ್ ಯೂಸುಫ್ 63 ರನ್ ಸಿಡಿಸಿ ತಂಡ ಬೃಹತ್ ಮೊತ್ತ ಕಲೆ ಹಾಕಲು ನೆರವಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment